ಕರ್ನಾಟಕ

karnataka

ETV Bharat / state

ಪ್ರೇಮಿಗಳ ಆತ್ಮಹತ್ಯೆ: ಯುವಕನ ಮೃತದೇಹಕ್ಕೆ ಮುಂದುವರೆದ ಶೋಧ ಕಾರ್ಯ - Shimoga crime latest news

ಶಿವಮೊಗ್ಗದ ಬೈಪಾಸ್​​ನಲ್ಲಿರುವ ಸೇತುವೆಯಿಂದ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Shimoga
Shimoga

By

Published : Aug 15, 2020, 6:41 PM IST

ಶಿವಮೊಗ್ಗ:ಪ್ರೇಮಿಗಳಿಬ್ಬರು ಬೈಪಾಸ್ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಿನ್ನೆ ಮಧ್ಯಾಹ್ನ ಪ್ರೇಮಿಗಳಿಬ್ಬರು ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಸ್ಥಳೀಯರು ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿದ್ದಾಳೆ.

ಇನ್ನು ಯುವತಿಯೊಂದಿಗೆ ನದಿಗೆ ಹಾರಿದ್ದ ಯುವಕನ ಮೃತದೇಹದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯವರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಈ ಕುರಿತು ತುಂಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details