ಕರ್ನಾಟಕ

karnataka

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಸಭೆ : 50‌ ಕೋಟಿ ಯೋಜನೆಗೆ ಅನುಮೋದನೆ

ಜಿಲ್ಲೆಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಸುಮಾರು 50 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಅಧಿಕಾರಿಗಳು ಸರ್ವಾನುಮತದಿಂದ ಒಪ್ಪಿಗೆ ನೀಡಿದರು.

By

Published : Jun 15, 2019, 9:55 AM IST

Published : Jun 15, 2019, 9:55 AM IST

Shimoga

ಶಿವಮೊಗ್ಗ :ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಗೊಳಿನ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗುವ ಸುಮಾರು 50 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ರಾಜೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಸಭೆ

ಜಿಲ್ಲೆಯ ಸಾಗರ ರಸ್ತೆಯಲ್ಲಿರುವ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಪ್ರಸಕ್ತ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಪ್ರಾಧಿಕಾರದಿಂದ ಕೈಗೊಳ್ಳುವ ಕಾಮಗಾರಿಗಳು ಹಾಗೂ ಸಮಸ್ಯೆಯ ಪರಿಹಾರಗಳ ಕುರಿತು ಚರ್ಚಿಸಲಾಯಿತು. ಪ್ರಸ್ತುತ ಸಂದರ್ಭದಲ್ಲಿ ಪ್ರಾಧಿಕಾರದ ವ್ಯಾಪ್ತಿಗೊಳಪಡುವ ವಿಧಾನ ಪರಿಷತ್ ಹಾಗೂ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ತಲಾ ರೂ.1.00 ಕೋಟಿ ಮೊತ್ತದ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಅನುದಾನ ಮಂಜೂರಾಗಿದೆ ಎಂದರು.

ಸರ್ಕಾರಕ್ಕೆ ಸಲ್ಲಿಸಲಾಗಿದ್ದ 70.00 ಕೋಟಿ ರೂಗಳ ಪ್ರಸ್ತಾವನೆಯ ಪೈಕಿ ಕಳೆದ ಬಜೆಟ್‍ನಲ್ಲಿ 27.42 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ. ಈ ಹಿಂದೆ ಬಳಕೆಯಾಗದೆ ಉಳಿದ 23 ಕೋಟಿ ರೂಗಳ ಅನುದಾನಕ್ಕೆ 300 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಈ ವೇಳೆ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ 13 ಜಿಲ್ಲೆಗಳು ವಿಶಾಲ ಭೂ ಪ್ರದೇಶ ಹೊಂದಿದ್ದು, ಜಿಲ್ಲಾ ಪಂಚಾಯಿತಿಗಳಿಗೆ ಬಿಡುಗಡೆಯಾಗುವ ಅನುದಾನವೂ ಕಡಿಮೆಯಾಗಿದೆ. ಆದ್ದರಿಂದ ಪ್ರಾಧಿಕಾರದ ವತಿಯಿಂದ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೂ ಅನುದಾನ ಬಿಡುಗಡೆಗೊಳಿಸಬೇಕೆಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಒತ್ತಾಯಿಸಿದರು.

ಬಳಿಕ ಕಂದಾಯ ಸಚಿವ ಸಂಸದೀಯ ಕಾರ್ಯದರ್ಶಿ ಐವಾನ್ ಡಿಸೋಜ ಅವರು ಮಾತನಾಡಿ, ಪ್ರದೇಶಾಭಿವೃದ್ಧಿ ಮಂಡಳಿಯು ವಿಶಾಲವಾದ ವ್ಯಾಪ್ತಿಯನ್ನು ಹೊಂದಿದ್ದು, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯಿಂದ ಹಾಗೂ ಪ್ರಾಕೃತಿಕ ವಿಕೋಪಗಳಿಗೆ ಗೋಡೆ ಕುಸಿತ, ರಸ್ತೆ ದುರಸ್ತಿ, ಕಾಲುಸಂಕ ನಿರ್ಮಾಣ, ಕೆರೆ-ಕಟ್ಟೆ-ಕಾಲುವೆಗಳ ದುರಸ್ತಿಗೆ ಅನುದಾನದ ಅಗತ್ಯವಿದೆ. ಮಂಡಳಿಯು ಕೈಗೊಳ್ಳುವ ಕಾಮಗಾರಿ ಹಾಗೂ ಯೋಜನೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗುತ್ತಿರುವ ಅನುದಾನ ಬಹಳ ಕಡಿಮೆಯಿದೆ. ಹೆಚ್ಚಿನ ಮೊತ್ತದ ಅನುದಾನ ಅಗತ್ಯವಿದ್ದು, ಅದಕ್ಕಾಗಿ ಪ್ರತ್ಯೇಕ ಕ್ರಿಯಾ ಯೋಜನೆ ಸಲ್ಲಿಸಿ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳನ್ನು ಒತ್ತಾಯಿಸಬೇಕು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ಕೆಲವು ಜಿಲ್ಲೆಗಳಿಗೆ ಮಲೆನಾಡು ಪ್ರದೇಶಾಭಿವೃಧ್ಧಿ ಮಂಡಳಿ ಹಾಗೂ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಪಡೆದು ಹೆಚ್ಚಿನ ಅನುದಾನ ಪಡೆಯುತ್ತಿದ್ದಾರೆ. ಇದರಿಂದಾಗಿ ಮಲೆನಾಡಿನ ಜಿಲ್ಲೆಗಳಿಗೆ ಅನುದಾನದ ಕೊರತೆ ಕಾಣುತ್ತಿದೆ. ಇದನ್ನು ಸರಿದೂಗಿಸಿ ಮಲೆನಾಡಿನ ಜಿಲ್ಲೆಗಳಿಗೆ ಹೆಚ್ಚಿನ ಅನುದಾನ ಕಾಯ್ದಿರಿಸುವಂತೆ ಅವರು ಮನವಿ ಮಾಡಿದರು.

ಸಭೆಯಲ್ಲಿ ಶಾಸಕರಾದ ಡಿ.ಎಸ್.ಸುರೇಶ್, ಸಿ.ಎಂ.ನಿಂಬಣ್ಣನವರ್, ಹರೀಶ್ ಪೂಂಜಾ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಧರ್ಮಸೇನ, ಶ್ರೀಕಾಂತ್ ಎಲ್. ಆಡಳಿತಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಉಪಸ್ಥಿತರಿದ್ದರು.

For All Latest Updates

TAGGED:

ABOUT THE AUTHOR

...view details