ಶಿವಮೊಗ್ಗ:ಸಾಗರ ರಸ್ತೆಯ ಲಯನ್ ಸಫಾರಿ ಮುಂಭಾಗದ ಗೂಡಂಗಡಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಅಂಗಡಿ ತೆರೆಯಲು ಮಾಲೀಕ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಸಾಗರ ರಸ್ತೆಯ ಶಕ್ತಿಧಾಮದ ನಿವಾಸಿ ಸತೀಶ್ (40) ಎಂದು ಗುರುತಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಲಾರಿಯಲ್ಲಿ ಕೊಳೆತ ಮೃತದೇಹ ಪತ್ತೆ:ಬಿ.ಹೆಚ್ ರಸ್ತೆಗೆ ಹೊಂದಿಕೊಂಡಿರುವ ಸರ್.ಎಂ.ವಿ ವಿಶ್ವೇಶ್ವರಯ್ಯ ರಸ್ತೆಯಲ್ಲಿನ ಖಾಲಿ ಜಾಗದಲ್ಲಿ ಲಾರಿಗಳನ್ನು ನಿಲ್ಲಿಸಲಾಗುತ್ತದೆ. ಇಲ್ಲಿನ ಲಾರಿಯೊಂದರಲ್ಲಿ ಮೊಹಮ್ಮದ್ ಅಲಿ(50) ಎಂಬವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕೋಟೆ ಪೊಲೀಸರು ಆಗಮಿಸಿ ಪರಿಶೀಲಿಸಿ, ಶವವನ್ನು ಶವಾಗಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.