ಕರ್ನಾಟಕ

karnataka

ETV Bharat / state

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ.. ಅಪರಾಧಿಗೆ 10 ವರ್ಷ ಕಾರಾಗೃಹ ಶಿಕ್ಷೆ - Shivamogga District Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಶಿವಮೊಗ್ಗ ಜಿಲ್ಲಾ ಪೋಕ್ಸೊ ನ್ಯಾಯಾಲಯ 10 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 60 ಸಾವಿರ ರೂ.ದಂಡ ವಿಧಿಸಿದೆ.

sexual assault
ಅಪರಾಧಿ

By

Published : Aug 24, 2022, 7:14 AM IST

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಶಿವಮೊಗ್ಗ ಜಿಲ್ಲಾ ಪೋಕ್ಸೋ ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪ್ಪ (45) ಎಂಬುವರು ಅದೇ ಗ್ರಾಮದ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಕುರಿತು 2018 ರಲ್ಲಿ ದೂರು ದಾಖಲಾಗಿತ್ತು.

ದೂರು ದಾಖಲಿಸಿಕೊಂಡ ಪೊಲೀಸರು ಹನುಮಂತಪ್ಪನ ಮೇಲೆ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಈ ಕುರಿತು ಜಿಲ್ಲಾ ಹೆಚ್ಚುವರಿ ಹಾಗೂ ಸತ್ರ ನ್ಯಾಯಲಯದ ಫಾಸ್ಟ್ ಟ್ರಾಕ್ ಕೋರ್ಟ್​ನಲ್ಲಿ ವಿಚಾರಣೆ ನಡೆಸಿದ ನ್ಯಾಯಧೀಶರಾದ ಮೋಹನ್.ಜೆ.ಎಸ್ ಅವರು ಆರೋಪಿ ಮಾಡಿದ‌ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಹನುಮಂತಪ್ಪನಿಗೆ 10 ವರ್ಷ ಕಾರಾಗೃಹ ಶಿಕ್ಣೆ ಹಾಗೂ 60 ಸಾವಿರ ರೂ ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ಆಗದಿದ್ದರೆ ಹೆಚ್ಚುವರಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ನೀಡಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್ ವಾದ ಮಂಡಿಸಿದ್ದರು.

ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಸಜೆ, ₹60 ಸಾವಿರ ದಂಡ

ABOUT THE AUTHOR

...view details