ಶಿವಮೊಗ್ಗ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್ ಹಿಂದಿನ ಷಡ್ಯಂತ್ರವನ್ನು ಬಯಲು ಮಾಡಬೇಕು ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಎಸ್ಡಿಪಿಐ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದ್ರು.
ಮಂಗಳೂರು ಬಾಂಬ್ ಪತ್ತೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಎಸ್ಡಿಪಿಐ ಆಗ್ರಹ - ಶಿವಮೊಗ್ಗದಲ್ಲಿ ಮಂಗಳೂರು ಬಾಂಬ್ ಪ್ರಕರಣ ತನಿಖೆ
ಮಂಗಳೂರು ಬಾಂಬ್ ಹಿಂದಿನ ಷಡ್ಯಂತ್ರವನ್ನು ಬಯಲು ಮಾಡಬೇಕು ಹಾಗೂ ಗೃಹ ಸಚಿವ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಎಸ್ಡಿಪಿಐ ಸಂಘಟನೆಯ ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ್ರು.
ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥ ಎಂದಿರುವ ಗೃಹ ಸಚಿವರ ಹೇಳಿಕೆಯ ಹಿಂದೆ ಪೂರ್ವ ನಿಯೋಜಿತ ತಂತ್ರ ಅಡಗಿದೆ. ಹಾಗಾಗಿ, ಈ ಪ್ರಕರಣದ ಹಿಂದಿರುವ ಸೂತ್ರದಾರರನ್ನು ಪತ್ತೆ ಹಚ್ಚಬೇಕು. ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.