ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪೂರ್ಣಾವಧಿ ಅಧಿಕಾರ ನಡೆಸಲು ಹೈಕಮಾಂಡ್ ಅವಕಾಶ ಮಾಡಿಕೊಡಬೇಕು ಎಂದು ಬಸವ ಕೇಂದ್ರದ ಮರುಳಸಿದ್ಧ ಸ್ವಾಮೀಜಿ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಸರ್ವ ಜನಾಂಗದ ಆಶಯಗಳಿಗೆ ಸ್ಪಂದಿಸುತ್ತ ಯಡಿಯೂರಪ್ಪ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರವಾಹ, ಕೊರೊನಾ ಸಂದರ್ಭಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಇಂತಹ ಮುಖ್ಯಮಂತ್ರಿಗಳನ್ನು ದಿಢೀರ್ ಬದಲಾಯಿಸುವುದು ಸರಿಯಲ್ಲ ಎಂದರು.