ಕರ್ನಾಟಕ

karnataka

ETV Bharat / state

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾಧ್ಯಮದ ಪಾತ್ರ ಮುಖ್ಯವಾಗಿದೆ: ಬಿಎಸ್​ವೈ - ಯಡಿಯೂರ ಲೇಟೆಸ್ಟ್ ನ್ಯೂಸ್

ಇಂದು ಶಿವಮೊಗ್ಗದ ರಾಜ್ಯ ಮಟ್ಟದ ದತ್ತನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಭಾಗವಹಿಸಿದ್ದರು. ಈ ವೇಳೆ, ಸುಮಾರು 18 ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

BS Yediyurappa
ಬಿ.ಎಸ್. ಯಡಿಯೂರಪ್ಪ

By

Published : Oct 8, 2021, 9:38 PM IST

ಶಿವಮೊಗ್ಗ:ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಾಧ್ಯಮದ ಪಾತ್ರ ಮಹತ್ವವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪ್ರಶಸ್ತಿ ಪ್ರದಾನ ಸಮಾರಂಭ

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ದತ್ತನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬಿಎಸ್​ವೈ ಉದ್ಘಾಟಿಸಿ ಮಾತನಾಡಿದರು.

ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಸಮಾಜದ ಕುಂದು - ಕೊರತೆಗಳ ಮೇಲೆ ಬೆಳಕು ಚೆಲ್ಲುತ್ತವೆ. ಸಮಾಜದಲ್ಲಿನ ಆಗುಹೋಗುಗಳನ್ನು ಆಡಳಿತ ನಡೆಸುವವರಿಗೆ ತಿಳಿಸುವ ಕೆಲಸವನ್ನು ಪತ್ರಿಕಾರಂಗ ಮಾಡುತ್ತಿದೆ. ವೃತ್ತಿ ಹಿರಿಮೆಯನ್ನು ಕಾಪಾಡಿಕೊಳ್ಳಲು ಪತ್ರಕರ್ತರು ಹೆಚ್ಚಿನ ಗಮನ ಕೊಡಬೇಕು ಎಂದು ತಿಳಿಸಿದರು.

ದೃಶ್ಯ ಮಾಧ್ಯಮದ ವೈಭವ.. ಮುದ್ರಣ ಮಾಧ್ಯಮ ನೇಪಥ್ಯಕ್ಕೆ

ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ದೃಶ್ಯ ಮಾಧ್ಯಮಗಳ ವೈಭವೀಕರಣದಿಂದ ಮುದ್ರಣ ಮಾಧ್ಯಮ ನೈಪಥ್ಯಕ್ಕೆ ಸರಿಯುತ್ತಿದೆ ಎಂದು ಹೇಳಲಾಗುತ್ತಿತ್ತು. ಆದರೆ ಮುದ್ರಣ ಮಾಧ್ಯಮ ತಮ್ಮ ಪ್ರಾತಿನಿಧ್ಯವನ್ನು ಹೆಚ್ಚಿಸಿಕೊಂಡಿರುವುದು ಶ್ಲಾಘನೀಯ. ಇತ್ತೀಚಿನ ದಿನಗಳಲ್ಲಿ ನಕಲಿ ಪತ್ರಕರ್ತರ ನಡುವೆ ಅಸಲಿ ಪತ್ರಕರ್ತರು ಗುರುತಿಸಿಕೊಳ್ಳುವುದು ಕಷ್ಟವಾಗಿದೆ. ನಮ್ಮ ಸರ್ಕಾರ ಪತ್ರಕರ್ತರಿಗೆ ಸಾಕಷ್ಟು ಸೌಲಭ್ಯ ನೀಡಿದೆ ಎಂದರು.

ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಗಣ್ಯರು

ಸಮಾರಂಭದಲ್ಲಿ 18 ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಂತರ ಕೋವಿಡ್ ಸಂಕಷ್ಟದಲ್ಲಿ ಪತ್ರಕರ್ತರ ನೆರವಿಗೆ ನಿಂತ ಮಾಜಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಯುವಕನ ಕೊಲೆ ಪ್ರಕರಣ: ಐವರು ಹಂತಕರಿಗೆ ಪೊಲೀಸ್​​ ಕಸ್ಟಡಿ, ಇನ್ನೈವರಿಗೆ ನ್ಯಾಯಾಂಗ ಬಂಧನ

ABOUT THE AUTHOR

...view details