ಶಿವಮೊಗ್ಗ :2019-20 ನೇ ಸಾಲಿನ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿ ಆಯ್ಕೆ ಕುರಿತು ಸಚಿವ ಕೆ.ಎಸ್ ಈಶ್ವರಪ್ಪ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆ ನಡೆಸಿದರು.
ಶಿವಮೊಗ್ಗದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ ಕುರಿತು ಸಭೆ - Meeting on selection of beneficiaries in Shimoga
2019-20 ನೇ ಸಾಲಿನ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿ ಆಯ್ಕೆ ಕುರಿತು ಸಚಿವ ಕೆ.ಎಸ್ ಈಶ್ವರಪ್ಪ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆ ನಡೆಸಿದರು.
ಈ ವೇಳೆ ವಿವಿಧ ನಿಗಮಗಳ ಯೋಜನೆಯ ಫಲಾನುಭವಿಗಳ ಆಯ್ಕೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಯೋಜನೆಯ ಅನುದಾನಕ್ಕಿಂತ ಹೆಚ್ಚು ಅರ್ಜಿಗಳು ಬಂದಿರುವುದನ್ನು ಗಮನಿಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರಿಗೆ ಅನುದಾನ ಹೆಚ್ಚಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ , ದೇವರಾಜ್ ಅರಸು ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ಬಂಜಾರ ಅಭಿವೃದ್ಧಿ ನಿಗಮ ಹೀಗೆ ವಿವಿಧ ನಿಗಮಗಳ ಫಲಾನುಭವಿಗಳ ಆಯ್ಕೆ ಪಟ್ಟಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.