ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಅನಧಿಕೃತ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಗಿ ರದ್ದು- ಸಚಿವ ಆರಗ ಜ್ಞಾನೇಂದ್ರ - ಅನಧಿಕೃತ ಮದ್ಯ ಮಾರಾಟ ಅಂಗಡಿ ಪರವಾನಿಗೆ ರದ್ದು ಕುರಿತು ಆರಗ ಜ್ಞಾನೇಂದ್ರ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ರಾಜ್ಯವನ್ನು ವ್ಯಸನ ಮುಕ್ತಗೊಳಿಸಲು ಆಂದೋಲನದ ರೀತಿಯಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ. ಕಳೆದ ಸಾಲಿನಲ್ಲಿ ಟನ್‍ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸ್ ಇಲಾಖೆ ವಶಪಡಿಸಿಕೊಂಡಿದ್ದು, ಕಳೆದ ತಿಂಗಳು ನಾಶಗೊಳಿಸಲಾಗಿದೆ. ಆದರೆ, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರವಿಲ್ಲದೇ ಈ ಪಿಡುಗನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿರುವುದು
ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿರುವುದು

By

Published : Jul 4, 2022, 5:38 PM IST

ಶಿವಮೊಗ್ಗ: ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕಾಗಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜತೆಯಲ್ಲಿ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು.

ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿರುವುದು

ರಾಜ್ಯವನ್ನು ವ್ಯಸನ ಮುಕ್ತಗೊಳಿಸಲು ಆಂದೋಲನದ ರೀತಿಯಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ. ಕಳೆದ ಸಾಲಿನಲ್ಲಿ ಟನ್‍ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸ್ ಇಲಾಖೆ ವಶಪಡಿಸಿಕೊಂಡಿದ್ದು, ಕಳೆದ ತಿಂಗಳು ನಾಶಗೊಳಿಸಲಾಗಿದೆ. ಆದರೆ, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರವಿಲ್ಲದೇ ಈ ಪಿಡುಗನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮೇಲೆ ಸಹ ಮಾದಕ ವಸ್ತು ಸೇವನೆ ಪಿಡುಗು ನೇರ ಪರಿಣಾಮ ಬೀರುತ್ತದೆ. ಕೆಲವು ಬಾಹ್ಯ ಶಕ್ತಿಗಳು ಮಾದಕ ವಸ್ತುಗಳನ್ನು ದೇಶದೊಳಗೆ ತರುವ ಮೂಲಕ ಅಪರೋಕ್ಷ ಯುದ್ಧವನ್ನು ಸಹ ನಮ್ಮ ದೇಶದ ಮೇಲೆ ಹೂಡಲು ಪ್ರಯತ್ನಿಸುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಮಾದಕ ವಸ್ತುಗಳ ಬಳಕೆ, ಮಾರಾಟವನ್ನು ಸಂಪೂರ್ಣವಾಗಿ ಮಟ್ಟಹಾಕಲು ಬದ್ಧವಾಗಿದೆ ಎಂದು ಸಚಿವರು ಹೇಳಿದರು.

ಶಿವಮೊಗ್ಗ ಜಿಲ್ಲೆಯನ್ನು ವ್ಯಸನ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಂಘ ಸಂಸ್ಥೆಗಳ ಜತೆ ಕೈಜೋಡಿಸಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ವಿಶೇಷ ವಾರ್ಡ್: ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಸನ ಮುಕ್ತತೆಗಾಗಿ ವಿಶೇಷ ವಾರ್ಡ್ ಈ ತಿಂಗಳ ಒಳಗಾಗಿ ಆರಂಭಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಎಲ್ಲ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ಸೇವನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಅರ್ಧದಲ್ಲೇ ಶಾಲೆ ಬಿಡುವ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ವಹಿಸಲಾಗುತ್ತಿದೆ. ಮಾದಕ ವಸ್ತು ಸೇವನೆ ಮಟ್ಟ ಹಾಕಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ತಿಳಿಸಿದರು.

ಓದಿ:ಯುವಕನ ಕೊಂದು, ಪ್ರಧಾನಿಗೆ ಜೀವ ಬೆದರಿಕೆ ಹಾಕಿದವರಿಗೆ ಉಗ್ರ ಶಿಕ್ಷೆಯಾಗಬೇಕು: ರೇಣುಕಾಚಾರ್ಯ

For All Latest Updates

TAGGED:

ABOUT THE AUTHOR

...view details