ಶಿವಮೊಗ್ಗ:ಸಿಎಂ ಸ್ಥಾನ ಬದಲಾವಣೆಯ ಕುರಿತು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸಿಎಂ ರಾಜೀನಾಮೆ ನೀಡುವ ವಿಚಾರದ ಕುರಿತು ನನಗೆ ಹೆಚ್ಚಿನ ಮಾಹಿತಿ ಇಲ್ಲ. ಹಾಗಾಗಿ ನಾನು ಪ್ರತಿಕ್ರಿಯೆ ನೀಡಲಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ: ಬಿ.ಸಿ.ಪಾಟೀಲ್
ಸಿಎಂ ಸ್ಥಾನ ಬದಲಾವಣೆ ಇಲ್ಲ ಎಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಸಿಎಂ ರಾಜೀನಾಮೆ ಕುರಿತು ಸಚಿವ ಬಿ ಸಿ ಪಾಟೀಲ್ ಹೇಳಿಕೆ
ದೆಹಲಿಗೆ ಹೋಗುವವರು, ಬರುವವರ ಬಗ್ಗೆ ನನಗೆ ಮಾಹಿತಿ ಇಲ್ಲ. ಸಿಎಂ ಸ್ಥಾನ ಬದಲಾವಣೆ ಇಲ್ಲ ಎಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಯವರು ಸ್ಪಷ್ಟವಾಗಿ ಹೇಳಿದ್ದಾರೆ. ಈ ವಿಚಾರದ ಕುರಿತು ಯಾರೂ ಸಹ ಅನವಶ್ಯಕವಾಗಿ ಮಾತನಾಡಬೇಡಿ ಎಂದು ಕೂಡಾ ನಮಗೆ ಹೇಳಿದ್ದಾರೆ ಎಂದರು.
ನಮ್ಮ ಸರ್ವಸಮ್ಮತನ ನಾಯಕನಾಗಿ ಯಡಿಯೂರಪ್ಪ ಆಯ್ಕೆ ಆಗಿದ್ದಾರೆ. ಸಿಎಂ ಯಾವ ಅರ್ಥದಲ್ಲಿ ಹೇಳಿದ್ದರೂ ನನಗೆ ಗೂತ್ತಿಲ್ಲ. ಈ ವಿಚಾರ ತಿಳಿದು ಮಾತನಾಡುತ್ತೇನೆ ಎಂದು ಹೇಳಿದರು.