ಶಿವಮೊಗ್ಗ: ಕುವೆಂಪು ಅವರನ್ನು ಅವಮಾನ ಮಾಡಿದ್ದು ವಿಪಕ್ಷ ನಾಯಕ ಸಿದ್ದರಾಮಯ್ಯನವರೇ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಯಲಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಆಗ್ರಹಿಸಿದರು.
ಪಠ್ಯ ಪುಸ್ತಕದಲ್ಲಿ ಕುವೆಂಪು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ನೈತಿಕತೆ ಇದ್ದರೆ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾತನಾಡಲಿ. ಅಂದು ಕುವೆಂಪು ನಾಡಗೀತೆ ತಿರುಚಿದ್ದು, ಅವರು ಮುಖ್ಯಮಂತ್ರಿ ಆಗಿದ್ದಾಗ (2017ರಲ್ಲಿ) ಒಂದೇ ಒಂದು ಕ್ರಮ ಕೂಡ ಕೈಗೊಳ್ಳಲಿಲ್ಲ. ಆಗ ಅದನ್ನು ಫಾರ್ವಡ್ ಮಾಡಿದ್ದ ರೋಹಿತ್ ಚಕ್ರತೀರ್ಥರ ಮೇಲೆ ಕೇಸ್ ಹಾಕಿದ್ದರು. ಅದಕ್ಕೂ ಅವರದೇ ಸರ್ಕಾರ ಬಿ ರಿಪೋರ್ಟ್ ಕೊಟ್ಟಿತ್ತು ಎಂದರು.