ಶಿವಮೊಗ್ಗ: ಕಣ್ಣೀರು ಸುರಿಸುವ ಮುಖ್ಯಮಂತ್ರಿ ನಮಗೆ ಬೇಡ, ಕಣ್ಣೀರು ಒರೆಸುವ ಮುಖ್ಯಮಂತ್ರಿ ನಮಗೆ ಬೇಕು ಎಂದು ಸೊರಬದಲ್ಲಿ ನೀರಾವರಿ ಯೋಜನೆ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಕಣ್ಣೀರು ಸುರಿಸುವ ಸಿಎಂ ನಮಗೆ ಬೇಡ, ಕಣ್ಣೀರು ಒರೆಸುವ ಮುಖ್ಯಮಂತ್ರಿ ಬೇಕು: ಸಚಿವ ಬಿ.ಸಿ.ಪಾಟೀಲ್ - ನೀರಾವರಿ ಯೋಜನೆ ಕಾರ್ಯಕ್ರಮ ಸೊರಬ
ಕಣ್ಣೀರು ಸುರಿಸುವ ಮುಖ್ಯಮಂತ್ರಿ ನಮಗೆ ಬೇಡ, ಕಣ್ಣೀರು ಒರೆಸುವ ಮುಖ್ಯಮಂತ್ರಿ ನಮಗೆ ಬೇಕು ಎಂದು ಸೊರಬದಲ್ಲಿ ನೀರಾವರಿ ಯೋಜನೆ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಸಚಿವ ಬಿ.ಸಿ ಪಾಟೀಲ್
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೊರಬ ನನ್ನ ಜನ್ಮಭೂಮಿ. ಹೀರೆಕೆರೂರು ನನ್ನ ಕರ್ಮ ಭೂಮಿ. ಇಲ್ಲಿ ನಿಂತು ಮಾತನಾಡುತ್ತಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು. ನಮಗೆ ರಾಜ್ಯದಲ್ಲಿ ರೈತರ ಕಣ್ಣೀರು ಒರೆಸುವ ಮುಖ್ಯಮಂತ್ರಿ ಅಂತಾ ಏನಾದರೂ ಇದ್ದರೆ ಅದು ಯಡಿಯೂರಪ್ಪನವರು ಮಾತ್ರ ಎನ್ನುವುದಕ್ಕೆ ಹೆಮ್ಮೆ ಆಗುತ್ತದೆ ಎಂದರು.
ಇನ್ನು ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ನಿಮ್ಮೊಂದಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಇದೆ ಎಂದು ಭರವಸೆ ನೀಡಿದರು.