ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆ ಬೆಂಗಳೂರಿನಿಂದ ವಿಶೇಷ ಸಮಿತಿ ರಚಿಸಿ ಸಾವಿನ ಬಗ್ಗೆ ಹಾಗೂ ಚಿಕಿತ್ಸೆಯ ಕುರಿತು ಸಮಗ್ರ ವರದಿ ನೀಡುವಂತೆ ಆದೇಶಿಸುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಇಂದು ನಗರದ ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಕೋವಿಡ್ ಸ್ಥಿತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ಹೆಚ್ಚಿದೆ. ಇದಕ್ಕೆ ಕಾರಣ ಜನರು ಕೊನೆಯ ಹಂತದಲ್ಲಿ ಚಿಕಿತ್ಸೆಗೆ ಬರುತ್ತಿರುವುದು ಹಾಗೂ ಐಸಿಯುಗೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಬೆಂಗಳೂರಿನಿಂದ ವಿಶೇಷ ಸಮಿತಿ ಕಳುಹಿಸಿ ಸಾವಿನ ಪ್ರಮಾಣದ ಬಗ್ಗೆ ಹಾಗೂ ಚಿಕಿತ್ಸೆಯ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಆದೇಶಿಸುತ್ತೇನೆ ಎಂದರು.