ಶಿವಮೊಗ್ಗ: ಜನವರಿ 2 ಮತ್ತು 3 ರಂದು ಜಿಲ್ಲೆಯಲ್ಲಿ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಲಿದ್ದು ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಬಿಜೆಪಿಯ ನಾಯಕರುಗಳು ಪೌರ ಕಾರ್ಮಿಕರಿಗೆ ಮನವಿ ಮಾಡಿಕೊಂಡರು.
ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಿಣಿ: ನಗರ ಸ್ವಚ್ಛವಾಗಿಡಲು ಪೌರ ಕಾರ್ಮಿಕರಿಗೆ ಮನವಿ - Shimoga's Latest News Update
ಜನವರಿ 2 ಮತ್ತು 3 ರಂದು ಶಿವಮೊಗ್ಗ ಹೊರ ವಲಯದ ಪೆಸೆಟ್ ಕಾಲೇಜಿನಲ್ಲಿ ಬಿಜೆಪಿಯ ವಿಶೇಷ ಕಾರ್ಯಕಾರಣಿ ಸಭೆ ನಡೆಯಲಿದೆ. ಈ ಸಭೆಗೆ ಕೇಂದ್ರ ಬಿಜೆಪಿ ನಾಯಕರುಗಳು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು ನಗರಕ್ಕೆ ಆಗಮಿಸಲಿದ್ದಾರೆ.
ಶಿವಮೊಗ್ಗ ಹೊರ ವಲಯದ ಪೆಸೆಟ್ ಕಾಲೇಜಿನಲ್ಲಿ ಬಿಜೆಪಿಯ ವಿಶೇಷ ಕಾರ್ಯಕಾರಣಿ ಸಭೆ ನಡೆಯಲಿದೆ. ಈ ಸಭೆಗೆ ಕೇಂದ್ರ ಬಿಜೆಪಿ ನಾಯಕರುಗಳು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು ನಗರಕ್ಕೆ ಆಗಮಿಸಲಿದ್ದಾರೆ. ಈಗಾಗಲೇ ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ನಗರದಲ್ಲಿ ಕೆಲ ಕಡೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಅಲ್ಲಲ್ಲಿ ಕಸದ ರಾಶಿ ಇದೆ ಇವೆಲ್ಲವುಗಳನ್ನು ತೆರವು ಮಾಡಿ ಸ್ವಚ್ಛವಾಗುವಂತೆ ನೋಡಿಕೊಳ್ಳಬೇಕಿದೆ ಎಂದು ಮನವಿ ಮಾಡಿಕೊಂಡರು.
ನಗರದ ಗಾಂಧಿ ಪಾರ್ಕ್‌ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ. ಡಿ. ಮೇಘರಾಜ್ ಸೇರಿದಂತೆ ಜಿಲ್ಲಾ ಬಿಜೆಪಿಯ ಮುಖಂಡರು ಪಾಲ್ಗೊಂಡಿದ್ದರು.