ಶಿವಮೊಗ್ಗ: ಸಂಬಳ ನೀಡದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರನಿಗೆ ಸಚಿವ ಕೆ.ಎಸ್. ಈಶ್ವರಪ್ಪ ತರಾಟೆಗೆ ತೆಗೆದುಕೊಂಡ ಘಟನೆ ನಗರದಲ್ಲಿ ನಡೆದಿದೆ.
ಹೊರಗುತ್ತಿಗೆ ನೌಕರರಿಗೆ ಸಂಬಳ ನೀಡದ ಅಧಿಕಾರಿ, ಗುತ್ತಿಗೆದಾರನಿಗೆ ಈಶ್ವರಪ್ಪ ತರಾಟೆ - Sahyadri College, Shimoga
ಹೊರಗುತ್ತಿಗೆ ನೌಕರರಿಗೆ ಸಂಬಳ ನೀಡದ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಗರಂ ಆಗಿದ್ದಾರೆ.
ಅಧಿಕಾರಿ,ಗುತ್ತಿಗೆದಾರನಿಗೆ ಈಶ್ವರಪ್ಪ ತರಾಟೆ
ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರಿಗೆ ಸಂಬಳ ನೀಡಿಲ್ಲ ಎಂದು ದಿನಗೂಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ ನೌಕರರ ದೂರು ಆಲಿಸಿ, ಅವರ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನೌಕರರಿಗೆ ಸಂಬಳ ನೀಡದೇ ಬೇಜವಾಬ್ದಾರಿ ತೋರಿದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರನಿಗೆ ಕೂಡಲೇ ಸಂಬಳ ನೀಡಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದಾರೆ.