ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧ ಇಂದು ಮಾಧ್ಯಮಗೋಷ್ಠಿ ನಡೆಸಿದ ಈಶ್ವರಪ್ಪ ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು. ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಸಿಎಂ ಭೇಟಿ ಮಾಡಿ ನಂತರ ರಾಜೀನಾಮೆ ಸಲ್ಲಿಸುತ್ತೇನೆ. ನನಗೆ ದೇವರ ಮೇಲೆ ನಂಬಿಕೆ ಇದೆ. ಈ ಪ್ರಕರಣದಿಂದ ಹೊರ ಬಂದೇ ಬರುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ನನ್ನಿಂದ ಒಂದೇ ಒಂದು ತಪ್ಪಿದ್ರೆ ಆ ಭಗವಂತನಲ್ಲಿ ನಾನೇ ಶಿಕ್ಷೆ ಕೊಡು ಎಂದು ಕೇಳಿಕೊಳ್ಳುತ್ತೇನೆ. ನಾನು ನಮ್ಮ ಇಲಾಖೆಯನ್ನು ಯಶಸ್ವಿಯಾಗಿ ತೆಗೆದುಕೊಂಡು ಹೋಗುತ್ತಿದ್ದೆ. ಅದರಲ್ಲೂ ಮನೆಮನೆಗೆ ಗಂಗೆ ಎಂಬ ಕಾರ್ಯಕ್ರಮ ಯಶಸ್ವಿಯಾಗಿದೆ. ಇದಕ್ಕೆಲ್ಲಾ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಎಂದರು.