ಶಿವಮೊಗ್ಗ: ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ರಾಗಿ ಗುಡ್ಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ; ರಾಗಿ ಗುಡ್ಡಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಸಚಿವ ಈಶ್ವರಪ್ಪ
ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ರಾಗಿ ಗುಡ್ಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಗಿಗುಡ್ಡವನ್ನು ಉಳಿಸುವ ನಿಟ್ಟಿನಲ್ಲಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ನಗರಕ್ಕೆ ಹೊಂದಿಕೊಂಡಿರುವ ರಾಗಿ ಗುಡ್ಡವನ್ನು ಜೈವಿಕ ವನವನ್ನಾಗಿಸಲು ಶಿವಮೊಗ್ಗದ ಪರಿಸರಾಸಕ್ತರು ಮುಂದಾಗಿದ್ದು, ರಾಗಿ ಗುಡ್ಡದಲ್ಲಿ ಈಗಾಗಲೇ ಸಾವಿರಾರು ಸಸಿಗಳನ್ನು ನೆಡಲಾಗಿದೆ. ಆದರೆ ಪರಿಸರಾಸಕ್ತರಿಗೆ ತಿಳಿಸದೇ ರಾಗಿ ಗುಡ್ಡ ಜಾಗವನ್ನು ಬೇರೆ ಉದ್ದೇಶಗಳಿಗೆ ಮಂಜೂರು ಮಾಡಲಾಗಿದ್ದು, ಇದೀಗ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಯಾವುದೇ ಕಾರಣಕ್ಕೂ ರಾಗಿಗುಡ್ಡವನ್ನು ಅನ್ಯ ಉದ್ದೇಶಗಳಿಗೆ ನೀಡಬಾರದು ಎಂದು ಜನತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ರಾಗಿ ಗುಡ್ಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಗಿಗುಡ್ಡವನ್ನು ಉಳಿಸುವ ನಿಟ್ಟಿನಲ್ಲಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.