ಶಿವಮೊಗ್ಗ:ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕೊಡಿಸುವ ನಿಟ್ಟಿನಲ್ಲಿ ಸಮಾಜದ ಮುಖಂಡರೊಂದಿಗೆ ಸಚಿವ ಕೆ.ಎಸ್.ಈಶ್ವರಪ್ಪ ಪೂರ್ವಭಾವಿ ಸಭೆ ನಡೆಸಿದರು.
ನಗರದ ಕುರುಬರ ವಿದ್ಯಾರ್ಥಿ ನಿಲಯದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಕುರುಬ ಸಮುದಾಯದ ಮುಖಂಡರೊಂದಿಗೆ ಜನವರಿ 7ರಂದು ಶಿಕಾರಿಪುರದಲ್ಲಿ ನಡೆಯಲಿರುವ ಎಸ್ಟಿ ಹೋರಾಟದ ಯಶಸ್ಸಿಗಾಗಿ ಇಂದು ಪೂರ್ವಭಾವಿ ಸಭೆ ನಡೆಸಿ ಮುಖಂಡರೊಂದಿಗೆ ಚರ್ಚೆ ನಡೆಸಿದರು.