ಶಿವಮೊಗ್ಗ: ಆರ್ಆರ್ ನಗರ ಹಾಗೂ ಶಿರಾ ಉಪ ಚುನಾವಣೆ ಎರಡಲ್ಲೂ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬಿಜೆಪಿ ಗೆದ್ದೇ ಗೆಲ್ಲುತ್ತದೆ, ಇದನ್ನು ಬರೆದಿಟ್ಟುಕೊಳ್ಳಿ ಎಂದಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನಮ್ಮನ್ನು ಬಿಟ್ಟು ಗೆಲ್ಲುವವರು ಯಾರಿದ್ದಾರೆ. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಡಿದಾಡುತ್ತಿದ್ದಾರೆ. ಜೆಡಿಎಸ್ನ ಕುಮಾರಸ್ವಾಮಿ ನಮ್ಮದು ಒಂದು ಪಕ್ಷ ಇದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಸಿಎಂ ಸ್ಥಾನವನ್ನು ಕಳೆದುಕೊಂಡ್ರು ಹಾಗೂ ಸರ್ಕಾರವನ್ನು ಕಳೆದುಕೊಂಡರು.