ಶಿವಮೊಗ್ಗ:ಇಂದು ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಫೆ. 20ರಂದು ಕೊಲೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ನಿವಾಸಕ್ಕೆ ಭೇಟಿ ನೀಡಿ, ಆತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಾಂಧ ಶಕ್ತಿಗಳು ಹರ್ಷನ ಹತ್ಯೆ ಮಾಡಿವೆ. ಯುವಕನ ಕುಟುಂಬಸ್ಥರನ್ನು ಭೇಟಿ ಮಾಡಿ ಬಂದಿದ್ದೇನೆ. ಯುವಕನ ಪೋಷಕರು ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮನವಿ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಸರ್ಕಾರ ಮತ್ತು ನ್ಯಾಯಾಲಯ ಸೂಕ್ತ ಶಿಕ್ಷೆ ನೀಡುತ್ತವೆ. ಹರ್ಷ ಕುಟುಂಬದ ಜೊತೆ ಸರ್ಕಾರ ಇದೆ ಎಂದು ಅಭಯ ನೀಡಿದರು.