ಶಿವಮೊಗ್ಗ: ಉತ್ತಮ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ನೀಡುವ ಹೊಣೆಗಾರಿಕೆ ನಮ್ಮದು. ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪೋಷಕರಲ್ಲಿ ಮನವಿ ಮಾಡಿದರು.
ಇಂದಿನಿಂದ ಮಕ್ಕಳನ್ನು ಶಾಲೆಗೆ ಕಳುಹಿಸಿ: ಪೋಷಕರಿಗೆ ಸಚಿವ ಈಶ್ವರಪ್ಪ ಮನವಿ - KS Eshwarappa has appealed to parents
ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಇಂದಿನಿಂದ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪೋಷಕರಲ್ಲಿ ಮನವಿ ಮಾಡಿದ್ದಾರೆ.
ಕೆ.ಎಸ್ ಈಶ್ವರಪ್ಪ
ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇಂದಿನಿಂದ ಶಾಲೆಗಳು ಶುರುವಾಗುತ್ತಿವೆ. ಮಗುವಿಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣ ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಇದಕ್ಕೆ ಪೋಷಕರ ಸಹಕಾರ ಅಗತ್ಯ. ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಮುಂದಾಗಿ, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.