ಕರ್ನಾಟಕ

karnataka

ETV Bharat / state

ಮೆಗ್ಗಾನ್ ಆಸ್ಪತ್ರೆ ಕಾಮಗಾರಿ ನಿಗದಿತ ಅವಧಿಯೊಳಗೆ ಮುಗಿಸಿ: ಸಚಿವ ಈಶ್ವರಪ್ಪ ಸೂಚನೆ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

KS Eshwarappa
KS Eshwarappa

By

Published : Jun 18, 2020, 3:40 PM IST

ಶಿವಮೊಗ್ಗ:ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿಮ್ಸ್​ನಲ್ಲಿರುವ 13 ಪ್ರಯೋಗಾಲಯಗಳನ್ನು 1.21 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತಿದೆ. ಇಲ್ಲಿನ ಐದು ಪ್ರಯೋಗಾಲಯಗಳ ನವೀಕರಣ ಈಗಾಗಲೇ ಪೂರ್ಣಗೊಂಡಿದೆ. 1.90 ಕೋಟಿ ರೂ. ವೆಚ್ಚದಲ್ಲಿ ಶರಾವತಿ ಬ್ಲಾಕ್ ಕಟ್ಟಡ ನವೀಕರಣ, 1.65 ಕೋಟಿ ರೂ. ವೆಚ್ಚದಲ್ಲಿ ಮೂರು ಬೋಧನಾ ಕೊಠಡಿ, 4.5 ಕೋಟಿ ರೂ. ವೆಚ್ಚದಲ್ಲಿ ಉಪಕರಣಗಳನ್ನು ಖರೀದಿಸಲು ಟೆಂಡರ್ ಮಾಡಲಾಗಿದೆ. 5.32 ಕೋಟಿ ರೂ. ವೆಚ್ಚದಲ್ಲಿ ವೈದ್ಯರ ವಸತಿ ನಿಲಯ ಕಟ್ಟಡ ಕಾಮಗಾರಿ ಚಾಲನೆಯಲ್ಲಿದೆ. ಇದೇ ರೀತಿ 2.16 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮರಣೋತ್ತರ ಪರೀಕ್ಷಾ ಕೇಂದ್ರ, ಉಪಕರಣ ಮತ್ತು ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ನಿರ್ಮಾಣ, 21.50 ಕೋಟಿ ರೂ. ವೆಚ್ಚದಲ್ಲಿ ಎಂಸಿಎಚ್ ಬ್ಲಾಕ್ ನಿರ್ಮಾಣ 12.49 ಕೋಟಿ ರೂ. ವೆಚ್ಚದಲ್ಲಿ ಎಂಸಿಎಚ್ ಬ್ಲಾಕ್‍ಗೆ ಉಪಕರಣ ಖರೀದಿಸುವ ಪ್ರಕ್ರಿಯೆ ನಡೆಸಲಾಗಿದೆ ಎಂದು ಶಿಮ್ಸ್ ಆಡಳಿತಾಧಿಕಾರಿ ಶಿವಕುಮಾರ್ ಸಚಿವರಿಗೆ ಮಾಹಿತಿ ನೀಡಿದರು.

'ಹೊರಗಿನಿಂದ ಔಷಧ ತರಲು ಚೀಟಿ ಬರೆಯಬಾರದು':

ಯಾವುದೇ ಕಾರಣಕ್ಕೂ ರೋಗಿಗಳಿಗೆ ಹೊರಗಿನಿಂದ ಔಷಧಿಯನ್ನು ತರಿಸಲು ಚೀಟಿ ಬರೆಯಬಾರದು. ಒಂದು ವೇಳೆ ಅನಿವಾರ್ಯವಾಗಿ ಚೀಟಿ ಬರೆದರೂ ಬಿಪಿಎಲ್ ಕಾರ್ಡುದಾರರಿಗೆ ಆ ಮೊತ್ತವನ್ನು ಪುನರ್ ಪಾವತಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಇರುವ ರೀತಿಯಲ್ಲಿ ಲಭ್ಯವಿರುವ ವೈದ್ಯರ ಹೆಸರು, ಸಮಯ ಇತ್ಯಾದಿಗಳ ವಿವರಗಳು ಎಲ್‍ಇಡಿ ಪರದೆಯಲ್ಲಿ ಪ್ರಚುರಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಶಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಆಡಳಿತ ಮಂಡಳಿ ಸದಸ್ಯರಾದ ಡಾ.ಗೌತಮ್, ವಾಣಿ ಕೋರಿ, ದಿವಾಕರ ಶೆಟ್ಟಿ, ಜಿಲ್ಲಾ ಸರ್ಜನ್ ಡಾ.ರಘುನಂದನ್ ಮತ್ತಿತರರು ಸಭೆಯಲ್ಲಿದ್ದರು.

ABOUT THE AUTHOR

...view details