ಶಿವಮೊಗ್ಗ: ಡಿನೋಟಿಫಿಕೇಷನ್ ವಿಚಾರದಲ್ಲಿ ಸಿಎಂ ರಾಜೀನಾಮೆ ಕೇಳಲು ವಿರೋಧ ಪಕ್ಷದವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಹಿಂದೆ ಕಾಂಗ್ರೆಸ್ ಪಕ್ಷದವರು ಸಿಎಂ ಆಗಿದ್ದಾಗ ಯಾರೂ ಡಿನೋಟಿಫಿಕೇಷನ್ ಮಾಡಿಲ್ವಾ?, ಅವರೆಲ್ಲಾ ರಾಜೀನಾಮೆ ನೀಡಿದ್ದಾರಾ ಎಂದು ಪ್ರಶ್ನಿಸಿದ ಅವರು, ವಿರೋಧ ಪಕ್ಷದಲ್ಲಿ ಇರುವುದಕ್ಕೆ ಅವರೆಲ್ಲ ಅಯೋಗ್ಯರು ಎಂದು ಆಕ್ರೋಶ ವ್ಯಕ್ತಪಡಿಸಿದರು.