ಶಿವಮೊಗ್ಗ:ಕೋವಿಡ್‌ಲಸಿಕೆಯನ್ನು ವಿರೋಧಿಸಿದವರೇ ಇಂದು ಅದೇ ಲಸಿಕೆಗಾಗಿ ಸರತಿ ಸಾಲಲ್ಲಿ ನಿಂತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕೊರೊನಾ ನಿಯಂತ್ರಣದಲ್ಲಿ ಜಗತ್ತಿನಲ್ಲಿಯೇ ಭಾರತ ಮೊದಲ ಸ್ಥಾನದಲ್ಲಿದೆ. ಲಸಿಕೆ ವಿಚಾರದಲ್ಲಿ, ಕೊರೊನಾ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ವಿಚಾರದಲ್ಲಿ ನಾವು ಮೊದಲ ಸ್ಥಾನದಲ್ಲಿದ್ದೇವೆ ಎಂದರು.