ಕರ್ನಾಟಕ

karnataka

ETV Bharat / state

ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ ಬೆಂಕಿ ಅವಘಡ: ಸ್ಥಳಕ್ಕೆ ಸಚಿವ ಈಶ್ವರಪ್ಪ ಭೇಟಿ, ಪರಿಶೀಲನೆ - ಶಿವಮೊಗ್ಗದಲ್ಲಿ ಬೆಂಕಿ ಅವಘಡ

ಗಾಂಧಿ ಬಜಾರ್​ನಲ್ಲಿ ಬೆಂಕಿ ಅವಘಡ ಸಂಭವಿಸಿದ ಹಿನ್ನೆಲೆ ಸ್ಥಳಕ್ಕೆ ಸಚಿವ ಈಶ್ವರಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿ ಕಟ್ಟಡದ ಮಾಲೀಕರಿಗೆ ಧೈರ್ಯ ತುಂಬಿದರು.

Minister KS Eshwarappa visit to Shimoga
ಗಾಂಧಿ ಬಜಾರ್​ನಲ್ಲಿ ಬೆಂಕಿ ಅವಘಡ ಸಂಭವಿಸಿದ ಹಿನ್ನೆಲೆ ಸ್ಥಳಕ್ಕೆ ಸಚಿವ ಈಶ್ವರಪ್ಪ ಭೇಟಿ

By

Published : Jan 24, 2021, 1:44 PM IST

Updated : Jan 24, 2021, 4:01 PM IST

ಶಿವಮೊಗ್ಗ: ಗಾಂಧಿ ಬಜಾರ್​ನಲ್ಲಿ ಬೆಂಕಿ ಅವಘಡ ಸಂಭವಿಸಿದ ಹಿನ್ನೆಲೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಭೇಟಿ ನೀಡಿ, ಪರಿಶೀಲಿಸಿದರು.

ಗಾಂಧಿ ಬಜಾರ್​ನಲ್ಲಿ ಬೆಂಕಿ ಅವಘಡ ಸಂಭವಿಸಿದ ಹಿನ್ನೆಲೆ ಸ್ಥಳಕ್ಕೆ ಸಚಿವ ಈಶ್ವರಪ್ಪ ಭೇಟಿ

ನಿನ್ನೆ ತಡರಾತ್ರಿ ನಗರದ ಗಾಂಧಿ ಬಜಾರ್​ನ ಕನ್ನಿಕಾ ಪರಮೇಶ್ವರಿ ದೇವಾಲಯದ ಮುಂಭಾಗದಲ್ಲಿರುವ ಭರತ್ ಮತ್ತು ಮೋಹನ್ ಸಹೋದರರ ಮಾಲೀಕತ್ವದ ಮಾತೃಶ್ರೀ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ಮೌಲ್ಯದ ಸೌಂದರ್ಯ ವರ್ಧಕ ಸಾಮಗ್ರಿಗಳು ನಾಶವಾಗಿದ್ದವು.

ಇ‌ಂದು ಬೆಳಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಸ್ಥಳಕ್ಕೆ ಭೇಟಿ ನೀಡಿ, ಪರೀಶಿಲನೆ ನಡೆಸಿ ಕಟ್ಟಡದ ಮಾಲೀಕರಿಗೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಚೆನ್ನಬಸಪ್ಪ ಸೇರಿದಂತೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

Last Updated : Jan 24, 2021, 4:01 PM IST

ABOUT THE AUTHOR

...view details