ಕರ್ನಾಟಕ

karnataka

By

Published : Apr 30, 2021, 6:46 PM IST

ETV Bharat / state

ಭದ್ರಾವತಿ, ತೀರ್ಥಹಳ್ಳಿ ಚುನಾವಣೆ ಸೋಲಿನ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು...?

ಕೋವಿಡ್ ನಿಯಂತ್ರಣಕ್ಕೆ ಪ್ರಸ್ತುತ ಎಲ್ಲಾ ಅಗತ್ಯ ಮೂಲಸೌಲಭ್ಯಗಳು ಲಭ್ಯವಿದ್ದು, ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸೂಚಿಸಿದರು.

minister-ks-eswarapp-talk-about-election-news
ಸಚಿವ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ:ಸಿಎಂ ತವರು ಕ್ಷೇತ್ರ ಶಿವಮೊಗ್ಗದಲ್ಲಿ ನಡೆದ ಭದ್ರಾವತಿ ನಗರ ಸಭೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಗೆದ್ದಗೆ ಏರಿದ್ದು, ಬಿಜೆಪಿ ಮುಖಭಂಗ ಅನುಭವಿಸಿದೆ. ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರೊಂದಿಗೆ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವ ಕೆ.ಎಸ್ ಈಶ್ವರಪ್ಪ

ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೊದಲು ಎರಡು ಸೀಟು ಇತ್ತು, ಈ ಚುನಾವಣೆಯಲ್ಲಿ ನಾಲ್ಕು ಸ್ಥಾನ ಗೆದ್ದಿದ್ದೇವೆ. ಹಾಗೆಯೆ ಕಳೆದ ಭಾರಿ ಎಲ್ಲಾ ವಾರ್ಡ್​ಗಳಲ್ಲಿ ಸ್ಪರ್ಧಿಸುವ ಶಕ್ತಿ ನಮಗಿರಲಿಲ್ಲ. ಆದರೆ ಈ ಭಾರಿ ಎಲ್ಲಾ ವಾರ್ಡ್​ಗಳಲ್ಲಿ ಸ್ಪರ್ಧಿಸಿದ್ದೆವು. ಅದರಂತೆ ತುಂಬಾ ವಾರ್ಡ್​ಗಳಲ್ಲಿ ಕಡಿಮೆ ಅಂತರದಲ್ಲಿ ನಮ್ಮ ಅಭ್ಯರ್ಥಿಗಳು ಸೋತಿದ್ದಾರೆ ಎಂದು ಸೋಲನ್ನು ಸಮರ್ಥಿಸಿಕೊಂಡರು.

ಇನ್ನೂ ತೀರ್ಥಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಏಕೆ ಹಾಗೆ ಆಗಿದೆ ಎನ್ನುವುದು ನನಗೆ ತಿಳಿದಿಲ್ಲ. ಅದನ್ನು ಜಿಲ್ಲಾ ಸಮಿತಿ ಹಾಗೂ ಶಾಸಕರ ಬಳಿ ಚರ್ಚೆ ಮಾಡಿ ಬಹುಮತ ಇದ್ದ ಪಟ್ಟಣ ಪಂಚಾಯತಿಯನ್ನು ಏಕೆ ಸೋತಿದ್ದೇವೆ ಎಂಬುದನ್ನು ಚರ್ಚಿಸುತ್ತೇವೆ. ಹಾಗೆಯೇ ಮುಂಬರುವ ಚುನಾವಣೆಗಳಲ್ಲಿ ಸಂಘಟನೆಯ ಮುಖಾಂತರ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದರು.

ಮೆಗ್ಗಾನ್ ವೈದ್ಯಕೀಯ ವ್ಯವಸ್ಥೆ ಸುವ್ಯವಸ್ಥಿತಗೊಳಿಸಲು ಕ್ರಮ:

ಕೋವಿಡ್ ನಿಯಂತ್ರಣಕ್ಕೆ ಪ್ರಸ್ತುತ ಎಲ್ಲಾ ಅಗತ್ಯ ಮೂಲಸೌಲಭ್ಯಗಳು ಲಭ್ಯವಿದ್ದು, ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸೂಚಿಸಿದರು. ಶಿವಮೊಗ್ಗ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಕೋವಿಡ್ ನಿರ್ವಹಣೆ ಪರಿಶೀಲನೆ ನಡೆಸಿದರು.

ಸಧ್ಯಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಹಾಗೂ ಕೋವಿಡೇತರ ರೋಗಿಗಳ ಚಿಕಿತ್ಸೆಗೆ ವೈದ್ಯರ ಕೊರತೆ ಉಂಟಾಗಿರುವುದಿಲ್ಲ. ಲಭ್ಯವಿರುವ ನರ್ಸ್‍ಗಳಿಂದ ಸಮರ್ಪಕವಾದ ಸೇವೆಯನ್ನು ಪಡೆದುಕೊಳ್ಳಲು ಕ್ರಮ ಕೈಗೊಳ್ಳಬೇಕು. ಶಿಮ್ಸ್ ನ ವಿವಿಧ ವಿಭಾಗಗಳ ಮುಖ್ಯಸ್ಥರು ಕಡ್ಡಾಯವಾಗಿ ಪ್ರತಿದಿನ ಕರ್ತವ್ಯಕ್ಕೆ ಹಾಜರಾಗಬೇಕು. ವಿವಿಧ ವಾರ್ಡ್‍ಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ವೈದ್ಯರ ಹೆಸರನ್ನು ಆಯಾ ವಾರ್ಡ್ ಹೊರಗೆ ಪ್ರತಿದಿನ ಪ್ರಕಟಿಸಬೇಕು. ಕರ್ತವ್ಯ ಲೋಪ ಎಸಗುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ನರ್ಸ್‍ಗಳ ಸಮರ್ಪಕವಾಗಿ ನಿರ್ವಹಣೆ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ. ಇದೇ ರೀತಿ ಕರ್ತವ್ಯಕ್ಕೆ ನಿಯೋಜಿಸಲಾಗುವ ವಿವಿಧ ವಿಭಾಗಗಳ ಮುಖ್ಯಸ್ಥರು ಪ್ರತಿ ದಿನ ವರದಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಈ ಆದೇಶವನ್ನು ಉಲ್ಲಂಘಿಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಅಂತಹವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕೋವಿಡ್ ಕಫ್ರ್ಯೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಸಚಿವರು ಪೊಲೀಸರಿಗೆ ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಅವರು ಮಾತನಾಡಿ, ಕೋವಿಡ್ ಪರೀಕ್ಷಾ ಫಲಿತಾಂಶ ವಿಳಂಬವಾಗುತ್ತಿರುವ ಕಾರಣ ಸಕಾಲದಲ್ಲಿ ಚಿಕಿತ್ಸೆ ಆರಂಭಿಸಲು ತೊಡಕಾಗುತ್ತಿದೆ. ಕೋವಿಡ್ ರೋಗಿಗಳ ವಾರ್ಡ್‍ಗೆ ಅವರ ಸಂಬಂಧಿಕರು ಯಾವುದೇ ಸುರಕ್ಷತಾ ಕಿಟ್ ಧರಿಸದೆ ನೇರವಾಗಿ ತೆರಳಲು ಅವಕಾಶ ನೀಡಬಾರದು. ಪಾಸಿಟಿವ್ ಬಂದ ವ್ಯಕ್ತಿಗಳ ಹೋಂ ಐಸೋಲೇಷನ್ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.ಇನ್ನೂ ಕೋವಿಡ್ ಐಸಿಯು ವಾರ್ಡ್ ಗಳಲ್ಲಿ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲಾ ಎಂದು ಅಧಿಕಾರಿಗಳ ವಿರುದ್ಧ ಆಯನೂರು ಮಂಜುನಾಥ್ ಗರಂ ಆದರು.

ABOUT THE AUTHOR

...view details