ಕರ್ನಾಟಕ

karnataka

ETV Bharat / state

ಕೋವಿಡ್ ತೂಲಗಿಸಲು ಮಠಗಳು ಸರ್ಕಾರದ ಕೈ ಜೋಡಿಸಬೇಕು : ಸಚಿವ ಈಶ್ವರಪ್ಪ ಮನವಿ - ಮಠಗಳು ಸೇವಾ ಚಟುವಟಿಕೆಯಲ್ಲಿ ಭಾಗವಹಿಸು

ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ಕೊಡಬೇಕು ಎಂಬ ಚಿಂತನೆ ನಡೆಯುತ್ತಿದೆ. ಸರ್ಕಾರ ಏನೇನು ಮಾಡಲು ಸಾಧ್ಯವೋ ಅದನ್ನು ಮಾಡುತ್ತಿದೆ..

minister-ks-eswarappa-talk
ಕೆ.ಎಸ್.ಈಶ್ವರಪ್ಪ ಮನವಿ

By

Published : May 8, 2021, 5:05 PM IST

ಶಿವಮೊಗ್ಗ :ಕೋವಿಡ್ ತೊಲಗಿಸುವ ನಿಟ್ಟಿನಲ್ಲಿ ಮಠಗಳು ಸೇವಾ ಚಟುವಟಿಕೆಯಲ್ಲಿ ಭಾಗವಹಿಸುವಂತೆ ಸಚಿವ ಕೆ.ಎಸ್.ಈಶ್ವರಪ್ಪ ಮಠಾಧಿಪತಿಗಳಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.

ಮಠಾಧಿಪತಿಗಳ ನೆರವು ಕೋರಿದ ಸಚಿವ ಕೆ.ಎಸ್.ಈಶ್ವರಪ್ಪ..

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಮಠ-ಮಾನ್ಯಗಳಿಗೆ ಸಾಕಷ್ಟು ಹಣವನ್ನು ನೀಡಿದೆ ಎಂದರು.

ಲಾಕ್‌ಡೌನ್ ಪ್ರತಿಕ್ರಿಯೆ :ಸೋಮವಾರದಿಂದ ಲಾಕ್‌ಡೌನ್ ವಿಚಾರದ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ಲಾಕ್‌ಡೌನ್ ಹಿನ್ನೆಲೆಯಲ್ಲಿ ಸರ್ಕಾರದ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಏನೇನು ಅನುಕೂಲ ಮಾಡಬೇಕೋ ಎಲ್ಲಾ ಮಾಡುತ್ತಿದೆ. ಸಾಕಷ್ಟು ಕಡೆ ವ್ಯಾಕ್ಸಿನ್ ಉಚಿತವಾಗಿ ಕೊಡುತ್ತಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ಕೊಡಬೇಕು ಎಂಬ ಚಿಂತನೆ ನಡೆಯುತ್ತಿದೆ. ಸರ್ಕಾರ ಏನೇನು ಮಾಡಲು ಸಾಧ್ಯವೋ ಅದನ್ನು ಮಾಡುತ್ತಿದೆ.

ಇಂತಹ ಸಂದರ್ಭದಲ್ಲಿ ಸೇವಾ ಸಂಸ್ಥೆಗಳು ಸರ್ಕಾರದ ಜೊತೆ ಕೈ ಜೋಡಿಸಬೇಕಿದೆ ಎಂದರು. ಶಿವಮೊಗ್ಗದಲ್ಲಿ ಹಲವು ಸೇವಾ ಸಂಸ್ಥೆಗಳು, ಸಂಘ-ಸಂಸ್ಥೆಗಳು ಉತ್ತಮ ಕೆಲಸ ಮಾಡುತ್ತಿವೆ ಎಂದರು.

ABOUT THE AUTHOR

...view details