ಶಿವಮೊಗ್ಗ:ಅಪರಿಚಿತ ವ್ಯಕ್ತಿಯೊಬ್ಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಸಚಿವ ಕೆ.ಎಸ್. ಈಶ್ವರಪ್ಪಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ - ಕೆ.ಎಸ್. ಈಶ್ವರಪ್ಪ ಲೆಟೆಸ್ಟ್ ನ್ಯೂಸ್
ಅಪರಿಚಿತ ವ್ಯಕ್ತಿಯೊಬ್ಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
![ಸಚಿವ ಕೆ.ಎಸ್. ಈಶ್ವರಪ್ಪಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ](https://etvbharatimages.akamaized.net/etvbharat/prod-images/768-512-5586924-thumbnail-3x2-eshw.jpg)
Minister K.S. Ishwarappa
ತಮಿಳು ಭಾಷೆಯಲ್ಲಿ ಮಾತನಾಡಿದ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಚಿವರು ಎಸ್ಪಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿ ತನಿಖೆ ನಡೆಸಲಾಗುವುದು ಎಂದು ಎಸ್ಪಿ ಕೆ.ಎಂ.ಶಾಂತರಾಜು ಸ್ಪಷ್ಟೀಕರಣ ನೀಡಿದ್ದಾರೆ.
ಸಚಿವರು ನಾಳೆ ಅಥವಾ ನಾಡಿದ್ದು ಲಿಖಿತ ದೂರು ನೀಡುವ ಸಾಧ್ಯತೆಯಿದೆ. ಈ ಹಿಂದೆ ಕೂಡ ಈಶ್ವರಪ್ಪ ಅವರಿಗೆ ದುಬೈ ಮೂಲದ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿತ್ತು.
Last Updated : Jan 3, 2020, 11:41 PM IST