ಶಿವಮೊಗ್ಗ: ಸಮಾಜದಲ್ಲಿ ಶಾಂತಿ ಕದಡುವವರನ್ನು ಬಂಧಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.
ಶಾಂತಿ ಕದಡುವವರನ್ನು ಬಂಧಿಸಿ ಕಾನೂನು ಕ್ರಮ: ಸಚಿವ ಆರಗ ಜ್ಞಾನೇಂದ್ರ - ಈಟಿವಿ ಭಾರತ ಕನ್ನಡ ನ್ಯೂಸ್
ಶಿವಮೊಗ್ಗದಲ್ಲಿ ನಿನ್ನೆ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.
ಶಾಂತಿ ಕದಡುವವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುವುದು : ಗೃಹ ಸಚಿವ ಆರಗ ಜ್ಞಾನೇಂದ್ರ
ನಿನ್ನೆ ಭರ್ಮಪ್ಪನಗರ ಹಾಗೂ ಸೀಗೆಹಟ್ಟಿಯಲ್ಲಿ ನಡೆದ ಘಟನೆಗಳಿಗೆ ಪ್ರತಿಕ್ರಿಯಿಸಿ, ಶಿವಮೊಗ್ಗದ ಎರಡು ಕಡೆ ಸಣ್ಣಪುಟ್ಟ ಘಟನೆಗಳು ನಡೆದಿವೆ. ಪೊಲೀಸರು ಸೂಕ್ತ ರೀತಿಯ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ಶಾಂತಿಯುತವಾಗಿತ್ತು. ಆದರೆ ಮತ್ತೆ ಶಾಂತಿ ಕದಡುವ ಪ್ರಯತ್ನ ನಡೆಸಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ತೆಗೆದುಕೊಂಡು ಆರೋಪಿಗಳನ್ನು ಬಂಧಿಸುವ ಕಾರ್ಯ ಮಾಡುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ :ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಎರಡು ಪ್ರಕರಣ ನಡೆದಿದ್ದು ದೂರು ದಾಖಲಾಗಿವೆ: ಎಸ್ಪಿ ಮಿಥುನ್ಕುಮಾರ್