ಶಿವಮೊಗ್ಗ: ನೂತನ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಅರುಣ್ ವಿಧಾನ ಪರಿಷತ್ನ ಮಾಜಿ ಸಭಾಪತಿ ಡಿ.ಎಸ್. ಶಂಕರಮೂರ್ತಿ ಅವರ ಮಗ. ಇವರಿಗೆ ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಅರುಣ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇದು ಅನ್ಯಕೋಮಿನವರ ಕೃತ್ಯ ಎಂದು ತಿಳಿಸಿದ್ದರು. "ನಿನ್ನೆ ಕೊಲೆಯಾದ ವ್ಯಕ್ತಿಯು ನಿಮ್ಮ ತಲೆಯಲ್ಲಿ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ ಅಷ್ಟೆ. ಆದರೆ, ಮುಂದಿನ ದಿನ ನಿಮ್ಮ ಹೆಂಡತಿ ಮಕ್ಕಳೇ ನಮ್ಮ ಟಾರ್ಗೆಟ್ ನೆನಪಿಡಿ. ಷಂಡ ಸರ್ಕಾರದ ಭಂಡರಂತೆ ವರ್ತಿಸುವ ಪ್ರಚಂಡರೇ," ಎಂದು ಎಂದು ಪೋಸ್ಟ್ ಮಾಡಿದ್ದರು.