ಕರ್ನಾಟಕ

karnataka

ETV Bharat / state

ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕಿಯರಿಗೆ ಮೊಬೈಲ್ ಫೋನ್ ವಿತರಣೆ

ಇಂದು ಕೇಂದ್ರ ಪುರಸ್ಕೃತ ಪೋಷಣೆ ಅಭಿಯಾನ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ಅಂಗನವಾಡಿಗಳ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಮೊಬೈಲ್​ ಫೋನ್​ ವಿತರಣೆ ಮಾಡಲಾಯಿತು.

mobile distrubute to anganavadi workers
ಶಿವಮೊಗ್ಗ

By

Published : Oct 3, 2020, 5:21 PM IST

ಶಿವಮೊಗ್ಗ:ಜಿಲ್ಲೆಯ ಎಲ್ಲಾ ಅಂಗನವಾಡಿಗಳ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಮೊಬೈಲ್‍ಗಳನ್ನು ವಿತರಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳು, ಕಿಶೋರಿಯರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಹಾಗೂ ನವಜಾತ ಶಿಶುಗಳ ಪೋಷಣೆ ಮತ್ತು ನಿರಂತರ ಅನುಪಾಲನೆಯ ಸದುದ್ದೇಶದಿಂದ ಮೊಬೈಲ್‍ಗಳನ್ನು ನೀಡಲಾಗಿದೆ ಎಂದು ಬಿ.ವೈ. ರಾಘವೇಂದ್ರ ತಿಳಿಸಿದರು.

ಶಿವಮೊಗ್ಗ

ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಕೇಂದ್ರ ಪುರಸ್ಕೃತ ಪೋಷಣೆ ಅಭಿಯಾನ ಯೋಜನೆಯಡಿ ದೇಶದ ಪ್ರಧಾನಮಂತ್ರಿ ರೂಪಿಸಿರುವ ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಭಾಗವಾಗಿ ಮೊಬೈಲ್‍ಗಳನ್ನು ವಿತರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುವ ಎಲ್ಲಾ ಕಾರ್ಯಕ್ರಮಗಳ ಅನುಪಾಲನೆ ಹಾಗೂ ಮಾಹಿತಿ ಪಡೆದುಕೊಳ್ಳಲು ಇದರಿಂದ ಅನುಕೂಲವಾಗಲಿದೆ ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ 2525 ಮೊಬೈಲ್ ಫೋನ್ ಹಂಚಿಕೆಯಾಗಿದ್ದು, ಜಿಲ್ಲೆಯಲ್ಲಿ ಇರುವ 2439 ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ ಹಾಗೂ 86 ಮೇಲ್ವಿಚಾರಕಿಯರಿಗೆ ಶೀಘ್ರದಲ್ಲಿ ನೀಡಲಾಗುವುದು. ಅಲ್ಲದೇ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಶಿಶುಮರಣ ಮತ್ತು ತಾಯಿ ಮರಣ ಪ್ರಮಾಣವನ್ನು ನಿಯಂತ್ರಿಸುವುದು ಕೂಡ ಈ ಕಾರ್ಯಕ್ರಮದ ಭಾಗವಾಗಿರಲಿದೆ ಎಂದರು. ಜಿಲ್ಲಾದ್ಯಂತ ಸೀಮಂತ, ಪೌಷ್ಠಿಕ ಆಹಾರ ಶಿಬಿರ, ಅನ್ನಪ್ರಾಶನ, ಸುಪೋಷಣ್ ದಿನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಸಾಂಕೇತಿಕವಾಗಿ ಮೊಬೈಲ್‍ಗಳನ್ನು ವಿತರಿಸಲಾಯಿತು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಾಸಕ ಕೆ.ಬಿ. ಅಶೋಕನಾಯ್ಕ್, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್. ವೈಶಾಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಜಿ.ಜಿ. ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

ABOUT THE AUTHOR

...view details