ಶಿವಮೊಗ್ಗ: ಆರ್ಎಸ್ಎಸ್ನ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶಿವಮೊಗ್ಗದಲ್ಲಿ ಶುಕ್ರವಾರದಿಂದ ಮೂರು ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ಶುಕ್ರವಾರ ಶುಭಶ್ರೀ ಸಮುದಾಯ ಭವನದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕರೊಂದಿಗೆ ಸಭೆ ನಡೆಸಲಿದ್ದಾರೆ. ಅಲ್ಲದೇ ನಿಧನರಾದ ಆರ್ಎಸ್ಎಸ್ನ ದಿನೇಶ್ ಪೈ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಬಳಿಕ ಕೋಟೆ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ನಾಳೆ ಬೆಳಗ್ಗೆ ದಕ್ಷಿಣ ಪ್ರಾಂತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಚಾಲಕರೂಂದಿಗೆ ಸಭೆ ನಡೆಸಲಿದ್ದಾರೆ. ಜನವರಿ 1 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಸಂಚಾಲಕರೂಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಪೇಸ್ ಕಾಲೇಜು ಸಭಾಂಗಣದಲ್ಲಿ ಆರ್‌ಎಸ್ಎಸ್ ಪ್ರಮುಖ ಕಾರ್ಯಕರ್ತರೊಂದಿಗೆ ಬೌದ್ದಿಕ್ ನಡೆಲಿದ್ದಾರೆ.