ಕರ್ನಾಟಕ

karnataka

ETV Bharat / state

ಪೂರ್ಣಿಮಾ ಶ್ರೀನಿವಾಸ್​ಗೆ ಮಂತ್ರಿ ಸ್ಥಾನ ನೀಡಲು ಆಗ್ರಹ - ಮೋಹನ್ ಕುಮಾರ್ ಆಗ್ರಹ

ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕು ಎಂದು ಗೊಲ್ಲ ಯಾದವ ಯುವ ವೇದಿಕೆಯ ಶಿವಮೊಗ್ಗ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ ಆಗ್ರಹಿಸಿದರು.

ಮೋಹನ್ ಕುಮಾರ್

By

Published : Jul 29, 2019, 6:18 PM IST

ಶಿವಮೊಗ್ಗ:ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕು ಎಂದು ಗೊಲ್ಲ ಯಾದವ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ ಆಗ್ರಹಿಸಿದರು.

ಪೂರ್ಣಿಮಾ ಶ್ರೀನಿವಾಸ್​ಗೆ ಮಂತ್ರಿ ಸ್ಥಾನ ನೀಡಲು ಆಗ್ರಹ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪೂರ್ಣಿಮಾ ಶ್ರೀನಿವಾಸ್ ಅವರು ಕೆ.ಆರ್. ಪುರದ ಕಾರ್ಪೋರೇಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅದರ ಜೊತೆಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಮಹಿಳಾ ಶಾಸಕಿಯಾಗಿ ಆಯ್ಕೆ ಆಗಿ ಕೇವಲ 14 ತಿಂಗಳ ಅವಧಿಯಲ್ಲಿಯೇ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಿ ಜಾತಿ, ಮತ, ಬೇಧವಿಲ್ಲದೇ ಹೋರಾಟ ಮಾಡಿ ಸವಲತ್ತುಗಳನ್ನು ಕೊಡಿಸುವ ಮೂಲಕ ಧೀಮಂತ ಮಹಿಳಾ ಶಾಸಕಿ ಆಗಿದ್ದಾರೆ.

ಅದೇ ರೀತಿ ಕರ್ನಾಟಕ ರಾಜ್ಯದಲ್ಲಿ 40 ಲಕ್ಷ ಜನಸಂಖ್ಯೆ ಹೊಂದಿರುವ ಸಮುದಾಯದಲ್ಲಿ ಏಕೈಕ ಮಹಿಳಾ ಶಾಸಕಿ ಆಗಿದ್ದಾರೆ. ಹಾಗಾಗಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಇಲ್ಲವಾದರೆ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ABOUT THE AUTHOR

...view details