ಶಿವಮೊಗ್ಗ: ಮೈಸೂರು - ಶಿವಮೊಗ್ಗ ಪ್ಯಾಸೆಂಜರ್ ರೈಲಿಗೆ ಸಿಲುಕಿ 40ಕ್ಕೂ ಹೆಚ್ಚಿನ ಕುರಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ರೈಲಿಗೆ ಸಿಲುಕಿ 40ಕ್ಕೂ ಹೆಚ್ಚು ಕುರಿಗಳು ಮೃತ ಇಂದು ಸಂಜೆ ಭದ್ರಾವತಿ ರೈಲ್ವೆ ನಿಲ್ದಾಣದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ರೈಲು ಹಳಿ ದಾಟುತ್ತಿದ್ದ ಕುರಿಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಭದ್ರಾವತಿ ಪಟ್ಟಣದಲ್ಲಿ ಸಂಭವಿಸಿದೆ.
ರೈಲು ಡಿಕ್ಕಿ ಹೊಡೆದ ರಭಸಕ್ಕೆ ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿವೆ. ಗಂಭೀರವಾಗಿ ಗಾಯಗೊಂಡಿದ್ದ ಕುರಿಗಳು ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡುತ್ತಿದ್ದವು. ಈ ಕುರಿಗಳು ಹಾವೇರಿ ಜಿಲ್ಲೆಯ ಸವಣೂರಿನ ಕುರಿಗಾಹಿ ಒಬ್ಬರಿಗೆ ಸೇರಿದವು ಎಂದು ತಿಳಿದು ಬಂದಿವೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹಳಿ ಮೇಲಿಂದ ಕುರಿಗಳನ್ನು ತೆರವು ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಓದಿ:ಪಿಎಸ್ಐ ಹಗರಣ: ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದ ಅಶ್ವತ್ಥ ನಾರಾಯಣ