ಕರ್ನಾಟಕ

karnataka

ETV Bharat / state

ಕೈಗಾರಿಕೋದ್ಯಮಿಗಳು ದೇಶದ ಪ್ರಗತಿಯಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ : ಬಿ ವೈ ರಾಘವೇಂದ್ರ - ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಘವೇಂದ್ರ ಭಾಗಿ

ಶಿವಮೊಗ್ಗದ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರಫ್ತುದಾರರ ಸಮಾವೇಶ ಮತ್ತು ರಫ್ತು ಅಭಿವೃದ್ಧಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಭಾಗವಹಿಸಿದ್ದರು. ಈ ವೇಳೆ ದೇಶದ ಅಭಿವೃದ್ಧಿಯಲ್ಲಿ ಕೈಗಾರಿಕೋದ್ಯಮಿಗಳ ಪಾತ್ರ ಕುರಿತು ಮಾತನಾಡಿದರು.

MP BY Raghavendra
ಬಿವೈ ರಾಘವೇಂದ್ರ

By

Published : Sep 22, 2021, 7:54 PM IST

ಶಿವಮೊಗ್ಗ:ಕೋವಿಡ್​ ಸಂಕಷ್ಟದ ಸಮಯದಲ್ಲಿ ಕೈಗಾರಿಕೆಗಳು ದೇಶದ ಅಭಿವೃದ್ಧಿಗೆ ಸಾಕಷ್ಟು ಕೆಲಸಗಳನ್ನು ಮಾಡುತ್ತಿವೆ. ಅವುಗಳಿಗೆ ಪೂರಕವಾದ ಕೆಲವು ಸಡಿಲಿಕೆಯನ್ನು ಮುಂದಿನ ದಿನದಲ್ಲಿ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಅಭಯ ನೀಡಿದರು.

ಸಂಸದ ಬಿವೈ ರಾಘವೇಂದ್ರ

ನಗರದ ರಾಜ್ಯ ನೌಕರರ ಭವನದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಇವರ ಸಂಯುಕ್ತಾಶ್ರಯದಲ್ಲಿ ರಫ್ತು ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೃಷಿಯ ಜೊತೆಗೆ ಕೈಗಾರಿಕೆಗಳಿಂದ ಹೆಚ್ಚಿನ ಕೆಲಸ ಆಗಿದೆ. ಶಿವಮೊಗ್ಗದಲ್ಲಿ ಬೃಹತ್, ಮಧ್ಯಮ ಹಾಗೂ ಸಣ್ಣ ಕೈಗಾರಿಕೆಗಳು ಅಧಿಕ ಸಂಖ್ಯೆಯಲ್ಲಿವೆ ಎಂದು ಮಾಹಿತಿ ನೀಡಿದರು.

ಭದ್ರಾವತಿಯಲ್ಲಿ ಪಿಪಿಇ ಮಾಡೆಲ್​​​ನಲ್ಲಿ ಮತ್ತೆ ಐರನ್ & ಸ್ಟೀಲ್ ಕೈಗಾರಿಕೆಯನ್ನು ಆರಂಭಿಸುತ್ತೇವೆ. ಜಿಲ್ಲೆಯಲ್ಲಿ ಶಾಹಿ ಗಾರ್ಮೆಂಟ್ ಯೂನಿಟ್​​​ಗಳಿಂದ ಸುಮಾರು 20,000 ಉದ್ಯೋಗಗಳು ಸೃಷ್ಟಿಯಾಗಿವೆ. ಶಿವಮೊಗ್ಗ ಇಂಡಸ್ಟ್ರಿಯಲ್ ಕಾರಿಡಾರ್ ಆಗುವ ಹಂತದಲ್ಲಿದೆ. ಉಡಾನ್ ಯೋಜನೆಯಲ್ಲಿ 5 ಪ್ರಮುಖ ಸಂಪರ್ಕದ ಮಾರ್ಗವನ್ನು ಕೇಂದ್ರಕ್ಕೆ ಸಲ್ಲಿಸಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಆರ್ಯ ವೈಶ್ಯ ನಿಗಮದ ಅಧಕ್ಷ ಡಿ.ಎಸ್. ಅರುಣ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಆರ್ ವಾಸುದೇವ, ಎಂ.ಎ.ರಮೇಶ್ ಹೆಗ್ಡೆ, ಫೇವರ್ ಚಂದ್, ಉಮೇಶ್ ಶಾಸ್ತ್ರಿ, ಎ.ಎಂ.ಸುರೇಶ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕೋವಿಡ್​ನಿಂದ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ 50 ಸಾವಿರ ರೂ.ಪರಿಹಾರ : ಸುಪ್ರೀಂಕೋರ್ಟ್​ಗೆ ಕೇಂದ್ರದ ಮಾಹಿತಿ

ABOUT THE AUTHOR

...view details