ಶಿವಮೊಗ್ಗ:ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ 423.15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿಗಂಧೂರು ಸೇತುವೆ ಕಾಮಗಾರಿಯನ್ನು ಸಂಸದ ಬಿ.ವೈ ರಾಘವೇಂದ್ರ ವೀಕ್ಷಣೆ ಮಾಡಿದರು.
ಸಿಗಂಧೂರು ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ ರಾಘವೇಂದ್ರ - MP BY Raghavendra inspected Sigandoor Bridge Works
ಶಿವಮೊಗ್ಗ ಜಿಲ್ಲೆ ಸಿಂಗಧೂರಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಸಂಸದ ಬಿ.ವೈ ರಾಘವೇಂದ್ರ ವೀಕ್ಷಣೆ ಮಾಡಿದರು.
ಸಿಗಂಧೂರು ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ ರಾಘವೇಂದ್ರ
ಅನೇಕ ವರ್ಷಗಳ ಬೇಡಿಕೆಯಾಗಿರುವ ಸೇತುವೆ ಕಾಮಗಾರಿಯು ಅತ್ಯಂತ ವೇಗವಾಗಿ ಸಾಗುತ್ತಿದ್ದು, ವಿನೂತನ ತಂತ್ರಜ್ಞಾನ ಬಳಸಿಕೊಂಡು ನಿರ್ಮಿಸುತ್ತಿರುವ ರಾಜ್ಯದ ಮೊದಲ ಸೇತುವೆ ಇದಾಗಿದೆ.
ಲಾಂಚ್ ಮೂಲಕ ಹೋಗಿ ಸೇತುವೆ ಕಾಮಾಗಾರಿ ವೀಕ್ಷಣೆ ಮಾಡಿದರು. ಸಾಗರ ಶಾಸಕ ಹರತಾಳು ಹಾಲಪ್ಪ ,ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಹಾಗೂ ಅಧಿಕಾರಿಗಳು ಸಂಸದರಿಗೆ ಸಾಥ್ ನೀಡಿದರು.