ಕರ್ನಾಟಕ

karnataka

ETV Bharat / state

VISL ಕಾರ್ಖಾನೆ ಪುನಶ್ಚೇತನ ಬಗ್ಗೆ ಕೇಂದ್ರದಿಂದ ಉತ್ತಮ ಸ್ಪಂದನೆ: ಬಿ.ವೈ.ರಾಘವೇಂದ್ರ - MP B.Y. Raghavendra meeting

ಎಂಪಿಎಂ ಹಾಗೂ ವಿಐಎಸ್ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

MP B.Y. Raghavendra meeting
ಸಂಸದ ಬಿ.ವೈ. ರಾಘವೇಂದ್ರ ಸಭೆ

By

Published : Mar 15, 2021, 3:52 PM IST

ಶಿವಮೊಗ್ಗ: ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಲು ಪ್ರಯತ್ನಿಸಲಾಗಿದ್ದು, ಈ ಸಂಬಂಧ ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವ​ರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಇದೇ ರೀತಿ ಎಂಪಿಎಂ ಕಾರ್ಖಾನೆಯನ್ನು ಖಾಸಗಿ ವ್ಯವಸ್ಥೆಯಲ್ಲಿ ನಡೆಸಲು ಈಗಾಗಲೇ ಟೆಂಡರ್ ಕರೆದಿದ್ದು, ಶೀಘ್ರ ಅದು ಒಂದು ಹಂತಕ್ಕೆ ಬರಲಿದೆ. ಈ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಕೈಗಾರಿಕಾ ಕಾರ್ಯದರ್ಶಿ ಗೌರವ್ ಗುಪ್ತ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details