ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಜೀವನಾಡಿ ಅಂಜನಾಪುರ ಜಲಾಶಯ ಭರ್ತಿಯಾಗಿದ್ದು, ಸಂಸದ ಬಿ.ವೈ. ರಾಘವೇಂದ್ರ ಅವರು ಪತ್ನಿ ತೇಜಸ್ವಿನಿ ಜೊತೆ ಬಾಗಿನ ಅರ್ಪಿಸಿದರು. ಇದಕ್ಕೂ ಮುನ್ನ ಜಲಾಶಯದ ದಡದಲ್ಲಿರುವ ಗಂಗಾ ದೇವಿಗೆ ಪೂಜೆ ಸಲ್ಲಿಸಿದರು.
ಅಂಜನಾಪುರ ಜಲಾಶಯ ಶಿಕಾರಿಪುರ ತಾಲೂಕಿನ ಜೀವನಾಡಿಯಾಗಿದೆ. ಶಿಕಾರಿಪುರ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ, ಕೃಷಿಗೆ ಚಟುವಟಿಕೆಯ ನೀರಿಗಾಗಿ ಈ ಜಲಾಶಯವನ್ನೇ ಅವಲಂಭಿಸಲಾಗಿದೆ.
ಸಂಸದ ಬಿ.ವೈ.ರಾಘವೇಂದ್ರ ಬಾಗಿನ ಅರ್ಪಿಸಿದರು ಓದಿ : ಉತ್ತರಕನ್ನಡದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ: ಜನರಲ್ಲಿ ಆತಂಕ
ಅಂಜನಾಪುರ ಜಲಾಶಯ 1.80 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಹೊಸನಗರ ತಾಲೂಕಿನಲ್ಲಿ ಹುಟ್ಟುವ ಕುಮದ್ವತಿ ನದಿಯು ಹರಿದು ಶಿಕಾರಿಪುರ ತಾಲೂಕಿನ ಮೂಲಕ ಹಾವೇರಿ ಜಿಲ್ಲೆಯ ಮದಗದ ಕೆರೆಗೆ ಸೇರುತ್ತದೆ. ಹೀಗೆ, ಹರಿಯುವ ಕುಮದ್ವತಿ ನದಿಗೆ ಶಿಕಾರಿಪುರ ತಾಲೂಕಿನ ಅಂಜನಾಪುರ ಗ್ರಾಮದ ಬಳಿ ಸಣ್ಣ ಬ್ಯಾರೇಜ್ ನಿರ್ಮಾಣ ಮಾಡಲಾಗಿದೆ.
ಬಾಗಿನ ಅರ್ಪಣೆ ವೇಳೆ ಮಲೆನಾಡು ಅಭಿವೃದ್ದಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಸೇರಿದಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.