ಶಿವಮೊಗ್ಗ: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹಾಗಾಗಿ ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು ಧೃತಿಗೆಡದೇ ಪರೀಕ್ಷೆ ಬರೆಯಲು ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದ ಸಂಸದ
ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಹಾರೈಸಿದ್ದಾರೆ.
ಸಂಸದ ಬಿವೈ ರಾಘವೇಂದ್ರ
ಈ ಹಿನ್ನೆಲೆಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಪೋಷಕರು ಮತ್ತು ಮಕ್ಕಳು ಆತಂಕ ಪಡುವುದು ಬೇಡ . ಎಸ್ಎಸ್ಎಲ್ಸಿ ಪ್ರತಿಯೊಬ್ಬರ ಜೀವನದಲ್ಲಿ ಬಹು ಮುಖ್ಯ ಶೈಕ್ಷಣಿಕ ಹಂತ. ಕೊರೊನಾ ಕಾರಣಕ್ಕಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಮಕ್ಕಳಿಗೆ ಸೋಂಕು ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಭರವಸೆ ನೀಡಿದರು.
ಜೊತೆಗೆ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.