ಶಿವಮೊಗ್ಗ:ಇತ್ತೀಚಿನ ರಾಜ್ಯ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರೋಕ್ಷವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಸುಳಿವು ನೀಡಿದ್ದಾರೆ. ಇದು ರಾಜಕೀಯದಲ್ಲಿ ಒಂದು ರೀತಿ ಸಂಚಲನವನ್ನುಂಟು ಮಾಡಿದೆ. ಈ ಬಗ್ಗೆ ಸಿಎಂ ಪುತ್ರ ಹಾಗೂ ಶಿವಮೊಗ್ಗ ಸಂಸದರಾಗಿರುವ ಬಿ.ವೈ. ರಾಘವೇಂದ್ರ 'ಈಟಿವಿ ಭಾರತ' ದೊಂದಿಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಈ ಕುರಿತಂತೆ 'ಈಟಿವಿ ಭಾರತ' ಪ್ರತಿನಿಧಿಯೊಂದಿಗೆ ಕಿರು ಸಂದರ್ಶನದಲ್ಲಿ ಮಾತನಾಡಿರುವ ಅವರು, ನಮ್ಮ ತಂದೆ ಹೋರಾಟದ ಮೂಲಕ ಅಧಿಕಾರಕ್ಕೆ ಬಂದವರು. ಯಡಿಯೂರಪ್ಪನವರು ಯಾವಾಗಲೂ ಅಭಿವೃದ್ಧಿಯನ್ನೇ ಉಸಿರಾಗಿಸಿಕೊಂಡವರು. ಅವರು ರಾಜೀನಾಮೆ ನೀಡುವ ಕುರಿತು ಏನನ್ನು ಮಾತನಾಡಿಲ್ಲ. ಅವರು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕರ್ತವ್ಯ ನಿರ್ವಹಿಸಿದ್ದಾರೆ. ಪಕ್ಷದ ಹೈ ಕಮಾಂಡ್ಗೆ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.
ಓದಿ: ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ: ಬಿ.ಎಸ್.ಯಡಿಯೂರಪ್ಪ
ವಯಸ್ಸು ಮಾನದಂಡವಲ್ಲ:
ವಯಸ್ಸಿನ ಅನುಗುಣವಾಗಿ ಹೈಕಮಾಂಡ್ ಏನು ಸೂಚನೆ ನೀಡುತ್ತದೆಯೋ ಅದರ ಮೇಲೆ ನಿರ್ಧಾರ ಮಾಡುವುದಾಗಿ ಸಿಎಂ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ನಮ್ಮ ಪಕ್ಷದಲ್ಲಿ ವಾಲೆಂಟರಿಯಾಗಿ ಅಡ್ವಾಣಿ ಜೀ ಸೇರಿದಂತೆ ಅನೇಕರು ಬೇರೆ ಬೇರೆ ಕಾರಣಗಳಿಂದ ತಮ್ಮ ಸ್ಥಾನದಿಂದ ಹಿಂದೆ ಸರಿದಿದ್ದಾರೆ. ಆದರೆ, ಪಕ್ಷದಲ್ಲಿ ವಯಸ್ಸನ್ನು ಮೀರಿ ಯಡಿಯೂರಪ್ಪನವರಿಗೆ ಹೈಕಮಾಂಡ್ ಸಿಎಂ ಆಗಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿ ಕೊಟ್ಟಿದ್ದು ಅವರಿಗೆ ತೃಪ್ತಿ ತಂದಿದೆ. ಮೋದಿ, ಪಕ್ಷದ ಸಂಘಟನೆ ತನಗೆ ಎಲ್ಲವನ್ನೂ ನೀಡಿದೆ ಎಂಬ ಗೌರವ ಅವರಿಗಿದೆ. ವಯಸ್ಸು ಎಂದಿಗೂ ಮಾನದಂಡವಾಗುವುದಿಲ್ಲ. ಎಲ್ಲದನ್ನೂ ಪಕ್ಷ ಕೊಟ್ಟಿದೆ ಎಂದಿದ್ದಾರೆ.
ಯಡಿಯೂರಪ್ಪನವರಿಗೆ ಅವರೇ ಸಾಟಿ :