ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಕೊಳಗಿ ಗ್ರಾಮದ ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆದ ಬೈಕ್ ರ್‍ಯಾಲಿಯಲ್ಲಿ ಸಂಸದ ಬಿ ವೈ ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಬೈಕ್ ನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ರ್‍ಯಾಲಿಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.
ಶಿಕಾರಿಪುರ ಕ್ಷೇತ್ರಕ್ಕೆ ಬಿ. ವೈ ವಿಜಯೇಂದ್ರರೆ ಅಭ್ಯರ್ಥಿ ಎಂದು ಬಿ. ಎಸ್ ಯಡಿಯೂರಪ್ಪ ಘೋಷಿಸಿದ ಬಳಿಕ ಸಖತ್ ಕ್ರಿಯಾಶೀಲರಾಗಿರುವ ಅವರು ಶಿಕಾರಿಪುರ ತಾಲೂಕಿನ ಪ್ರತಿಹಳ್ಳಿಗಳಿಗೂ ಭೇಟಿ ನೀಡಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅದರಂತೆ ಪಕ್ಷ ಸಂಘಟನೆಗಾಗಿ ಆಯೋಜಿಸಿದ್ದ ಯುವ ಮೋರ್ಚಾ ಬೈಕ್ ರ್‍ಯಾಲಿಯಲ್ಲಿ ಇಂದು ಸಹ ಸಂಸದ ಬಿ. ವೈ ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಾರ್ಯಕರ್ತರೊಂದಿಗೆ ಬುಲೆಟ್ ಬೈಕ್ ರ್‍ಯಾಲಿಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.