ಶಿವಮೊಗ್ಗ:ಭಾರತ ಸಂಗೀತಲೋಕ ಹಾಗೂ ಚಿತ್ರರಂಗ ಕಂಡ ಮಹಾನ್ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಂಸದರು, ಕಳೆದ 50 ವರ್ಷಗಳಿಂದ ಬಾಲಸುಬ್ರಹ್ಮಣ್ಯಂ ಅವರು ವಿವಿಧ ಭಾಷೆಗಳಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಗಿನ್ನಿಸ್ ದಾಖಲೆ ಮಾಡಿದ್ದಾರೆ.
ಎಸ್ ಪಿಬಿ ಅವರು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದು, ನಟರಾಗಿಯೂ ಜನಪ್ರಿಯರಾಗಿದ್ದರು. ಇಂತಹ ಕನ್ನಡ ನಾಡು ಕಂಡ ಅಮೂಲ್ಯ ರತ್ನವನ್ನು ನಾವು ಇಂದು ಕಳೆದುಕೊಂಡಿದ್ದೇವೆ. ಬಾಲಸುಬ್ರಹ್ಮಣ್ಯಂ ಅವರು ನಾಲ್ಕು ಭಾಷೆಗಳಲ್ಲಿ 6 ರಾಷ್ಟ್ರ ಪ್ರಶಸ್ತಿ ಪಡೆದ ಗಾಯಕರಲ್ಲಿ ಒಬ್ಬರಾಗಿದ್ದರು. ಪದ್ಮಶ್ರೀ, ಪದ್ಮಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು ಎಂದು ಸಂಸದ ರಾಘವೇಂದ್ರ ನೆನೆದಿದ್ದಾರೆ.
ಶ್ರೀಯುತರ ನಿಧನದಿಂದ ದೇವವು ಓರ್ವ ಶ್ರೇಷ್ಠ ಗಾಯಕರನ್ನು ಕಳೆದುಕೊಂಡು ಸಂಗೀತಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ದೇವರು ಶಾಂತಿ ನೀಡಲೆಂದು ಹಾಗೂ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.