ಕರ್ನಾಟಕ

karnataka

ETV Bharat / state

ಜಲಪಾತದಲ್ಲಿ ಕೊಚ್ಚಿಹೋಗಿದ್ದ ಶರತ್​ ಮೃತದೇಹ ಪತ್ತೆ.. ಮೃತನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಂಸದ ರಾಘವೇಂದ್ರ - ಕೊಲ್ಲೂರು ಬಳಿ ಅರಶಿನಗುಂಡಿ ಜಲಪಾತ

ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಕಾಲು ಜಾರಿಬಿದ್ದು ಮೃತಪಟ್ಟ ಯುವಕನ ಮನೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

mp-raghavendra-visited-sarath-house-who-died-in-the-waterfall
ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಶರತ್​ ಮೃತದೇಹ ಪತ್ತೆ: ಮೃತನ ಮನೆಗೆ ಭೇಟಿ ನೀಡಿ ಸಂತ್ವಾನ‌ ಹೇಳಿದ ಸಂಸದ ರಾಘವೇಂದ್ರ

By

Published : Jul 30, 2023, 10:41 PM IST

ಶಿವಮೊಗ್ಗ: ಉಡುಪಿ ಜಿಲ್ಲೆಯ ಕೊಲ್ಲೂರು ಬಳಿ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಕಾಲು ಜಾರಿಬಿದ್ದು ನಾಪತ್ತೆಯಾಗಿದ್ದ ಭದ್ರಾವತಿಯ ಶರತ್ ಮೃತದೇಹ ಭಾನುವಾರ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಭದ್ರಾವತಿಯ ಕೆ ಹೆಚ್ ನಗರದ ಬಳಿಯ ಸುಣ್ಣದಹಳ್ಳಿಯ‌ಲ್ಲಿರುವ ಶರತ್ ಮನೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತನ ತಂದೆ, ತಾಯಿ ಹಾಗೂ ಸಹೋದರಿಯರಿಗೆ ಶರತ್ ಸಾವಿನ ದುಃಖ ಭರಿಸುವ ಶಕ್ತಿಯನ್ನು ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಉಡುಪಿ ಜಿಲ್ಲಾಡಳಿತಕ್ಕೆ ಕರೆ ಮಾಡಿ, ತಕ್ಷಣ ಮರಣೋತ್ತರ ಪರೀಕ್ಷೆ ನಡೆಸಿ ಶರತ್​ ಮೃತದೇಹವನ್ನು ಭದ್ರಾವತಿಗೆ ರವಾನಿಸಲು ವ್ಯವಸ್ಥೆ ಮಾಡಿದರು. ಈ ವೇಳೆ ಮೃತನ ತಂದೆ ಮುನಿಸ್ವಾಮಿ, ಇಂತಹ ಜಲಪಾತಗಳಿಗೆ ಸಾರ್ವಜನಿಕರು ಹೋಗದಂತೆ ನಿಷೇಧಿಸಬೇಕು ಎಂದು ನೋವಿನಿಂದ ಸಂಸದರಲ್ಲಿ ಮನವಿ ಮಾಡಿದರು.

ಕಳೆದ ವಾರ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಬಂಡೆಯ ಮೇಲೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಶರತ್​ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರು ಪಾಲಾಗಿದ್ದ. ಶರತ್ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿತ್ತು. ಯುವಕನ ಶವ ಪತ್ತೆ ಹಚ್ಚಲು ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರು ಮತ್ತು ಮುಳುಗು ತಜ್ಞರ ತಂಡಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಅದರಂತೆ ಭಾನುವಾರ ಶರತ್​ ಮೃತದೇಹ ಅರಶಿನಗುಂಡಿ ಜಲಪಾತದಿಂದ 200 ಮೀಟರ್​ ಕೆಳಗಡೆ ದೊರೆತಿದೆ. ಬಂಡೆ ಕಲ್ಲಿನೊಳಗಡೆ ಸಿಲುಕಿ ಹಾಕಿಕೊಂಡ ಮೃತದೇಹವನ್ನು ಹೊರತೆಗೆಯಲಾಗಿದೆ.

ಘಟನೆ ಹಿನ್ನೆಲೆ: ಜುಲೈ 23 ರಂದು ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಶರತ್​, ಜಲಪಾತ ವೀಕ್ಷಣೆಗೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿತ್ತು. ಬಂಡೆಯ ಮೇಲೆ ನಿಂತು ಧುಮ್ಮಿಕ್ಕುವ ಜಲಪಾತವನ್ನು ಇವರು ವೀಕ್ಷಿಸುತ್ತಿದ್ದರು. ಇದನ್ನು ಸ್ನೇಹಿತ ಮೊಬೈಲ್​ನಲ್ಲಿ ಚಿತ್ರೀಕರಿಸುತ್ತಿದ್ದ. ಆದರೆ ಶರತ್​ ಕುಮಾರ್​ ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಬಿದ್ದು ಕೊಚ್ಚಿ ಹೋಗಿದ್ದ. ಈ ಸಂಬಂಧ ಕೊಲ್ಲೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮುಂಗಾರು ಮಳೆ​ ಜೋರಾಗಿದ್ದು, ಜಲಪಾತಗಳು ರಭಸವಾಗಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಸದ್ಯ ಅರಶಿನಗುಂಡಿ ಫಾಲ್ಸ್ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜುಲೈ 30 ರಿಂದ ಕೊಡಚಾದ್ರಿ ಬೆಟ್ಟಕ್ಕೂ ಪ್ರವೇಶ ನಿಷೇಧವಿದೆ. ಫಾಲ್ಸ್, ಚಾರಣಕ್ಕೂ ಕಡಿವಾಣ ಹಾಕಲಾಗಿದೆ.

ಇದನ್ನೂ ಓದಿ:ಅರಶಿನಗುಂಡಿ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಶರತ್​ ಮೃತದೇಹ ವಾರದ ಬಳಿಕ ಪತ್ತೆ

ABOUT THE AUTHOR

...view details