ಶಿವಮೊಗ್ಗ: ಕಾಂಗ್ರೆಸ್ಗೆ ರಾಜೀನಾಮೆ ನೀಡಿರುವ ಮಾಜಿ ಸಂಸದ ಮುದ್ದೆಹನುಮೆಗೌಡ ಅವರು ಶೀಘ್ರದಲ್ಲಿಯೇ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುದ್ದೆಹನುಮೆಗೌಡ ಅವರು ನನ್ನನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದಿದ್ದಾರೆ.
ಮುದ್ದೆಹನುಮೇಗೌಡ ಸೇರಿದಂತೆ ಅನೇಕರು ವಿವಿಧ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಗೆ ಸೇರುವವರನ್ನು ಶೀಘ್ರದಲ್ಲಿಯೇ ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು ಎಂದರು. ಈ ಮೂಲಕ ಮುದ್ದೆಹನುಮೆ ಗೌಡರು ಬಿಜೆಪಿ ಸೇರುವುದು ಖಚಿತವಾಗಿದೆ.