ಶಿವಮೊಗ್ಗ: ಭಾವೈಕ್ಯತೆಯ ಮೊಹರಂ ಹಬ್ಬವನ್ನು ನಾಡಿನಾದ್ಯಂತ ಆಚರಿಸಲಾಗುತ್ತದೆ. ಅದರಂತೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ತಾಂಡಾದಲ್ಲಿ ಬಂಜಾರ ಸಮುದಾಯ ಜನರು ಮೊಹರಂ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.
ಕಳೆದ ಅರವತ್ತು ವರ್ಷಗಳಿಂದ ಊರಿನಲ್ಲಿ ಯಾವುದೇ ಮುಸ್ಲಿಂ ಸಮುದಾಯದ ಮನೆಗಳಿಲ್ಲದಿದ್ದರೂ ಬಂಜಾರ ಸಮುದಾಯದ ಜನರು ಈ ಮೊಹರಂ ಅದ್ಧೂರಿಯಾಗಿ ಆಚರಿಸುತ್ತಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಮೊಹರಂ ಸರಳವಾಗಿ ಆಚರಿಸಿದರು.
ಅಲಾಯಿ ದೇವರ ಗದ್ದುಗೆಗೆ ಪೂಜೆ ಸಲ್ಲಿಸಿದರು. ದೇಶದಲ್ಲಿ ವ್ಯಾಪಿಸಿರುವ ಕೊರೊನಾ ಮಹಾಮಾರಿ ದೇಶಬಿಟ್ಟು ಬೇಗ ತೊಲಗಲಿ ಎಂದು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.