ಶಿವಮೊಗ್ಗ: ಕರ್ತವ್ಯ ನಿರ್ವಹಿಸುವಾಗಲೇ ಪಾಲಿಕೆಯ ಹೆಲ್ತ್ ಇನ್ಸ್ಪೆಕ್ಟರ್ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಹೆಲ್ತ್ ಇನ್ಸ್ಪೆಕ್ಟರ್ ಆಗಿದ್ದ ಮೊಹಿನುದ್ದೀನ್(42) ಮೃತ ದುರ್ದೈವಿ.
ಶಿವಮೊಗ್ಗ: ಕರ್ತವ್ಯ ನಿರ್ವಹಿಸುವಾಗಲೇ ಹೃದಯಾಘಾತದಿಂದ ಪಾಲಿಕೆ ಹೆಲ್ತ್ ಇನ್ಸ್ಪೆಕ್ಟರ್ ನಿಧನ - ಶಿವಮೊಗ್ಗ ಪಾಲಿಕೆ ಹೆಲ್ತ್ ಇನ್ಸ್ಪೆಕ್ಟರ್ ಮೊಹಿನುದ್ದೀನ್
ಇಂದು ಬೆಳಗ್ಗೆ ಪಾಲಿಕೆಗೆ ಕರ್ತವ್ಯಕ್ಕೆ ಆಗಮಿಸಿದ್ದ ಅವರು ಪಾಲಿಕೆಯ ಸಭಾಂಗಣಕ್ಕೆ ಬರುತ್ತಿದ್ದಂತಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ನೇಹಿತರು ಅವರನ್ನು ಆಸ್ಪತ್ರೆಗೆ ರವಾನಿಸಿದರೂ ಫಲನೀಡಲಿಲ್ಲ.
ಹೃದಯಾಘಾತದಿಂದ ಪಾಲಿಕೆ ಹೆಲ್ತ್ ಇನ್ಸ್ಪೆಕ್ಟರ್ ನಿಧನ
ಇಂದು ಬೆಳಗ್ಗೆ ಪಾಲಿಕೆಗೆ ಕರ್ತವ್ಯಕ್ಕೆಂದು ಆಗಮಿಸಿದ್ದ ಅವರು ಪಾಲಿಕೆಯ ಸಭಾಂಗಣಕ್ಕೆ ಬರುತ್ತಿದ್ದಂತಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ನೇಹಿತರು ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಷ್ಟರಲ್ಲಿ ಮೊಹಿನುದ್ದೀನ್ ಪ್ರಾಣಪಕ್ಷಿ ಹಾರಿಹೋಗಿತ್ತು. ಮೃತರು ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದು, ಅವರ ಅಗಲಿಕೆಗೆ ಪಾಲಿಕೆ ಮೇಯರ್ ಸಂತಾಪ ಸೂಚಿಸಿದ್ದಾರೆ. ಮೃತರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ.
ಇದನ್ನೂ ಓದಿ:ಪರಿಷತ್ ಚುನಾವಣೆ ನಂತರ ಸಂಪುಟ ಪುನಾರಚನೆ.. ಬಿ ವೈ ವಿಜಯೇಂದ್ರಗೆ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ!?
TAGGED:
ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್