ಶಿವಮೊಗ್ಗ: ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಸೂಚನೆಯ ಮೇರೆಗೆ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಶ್ರೀಗಳನ್ನು ಕಳೆದ ರಾತ್ರಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿದೆ.
ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್ - ಮೆಗ್ಗಾನ್ ಆಸ್ಪತ್ರೆಯಲ್ಲಿ ಕರೋನರಿ ಎಂಜಿಯೋಗ್ರಾಮ್
ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳಿಗೆ ಹೃದಯ ಸಂಬಂಧಿ ಸಮಸ್ಯೆ ಉಂಟಾಗಿದ್ದು ಕಳೆದ ರಾತ್ರಿ ಚಿತ್ರದುರ್ಗದಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿದೆ.
ರಾತ್ರೋ ರಾತ್ರಿ ಮೆಗ್ಗಾನ್ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್
ಶ್ರೀಗಳಿಗೆ ಮೆಗ್ಗಾನ್‌ನಲ್ಲಿ ಕರೋನರಿ ಎಂಜಿಯೋಗ್ರಾಮ್ ಮಾಡಿಸಲು ಕೋರ್ಟ್ ಅನುಮತಿ ನೀಡಿತ್ತು. ಮುರುಘಾ ಮಠವನ್ನು ಪ್ರಕರಣದಲ್ಲಿ ಪ್ರತಿನಿಧಿಸುವ ವಕೀಲ ಉಮೇಶ್ ಮಾತನಾಡಿ, "ನ್ಯಾಯಾಲಯದ ಆದೇಶದ ಮೇರೆಗೆ ಆಸ್ಪತ್ರೆಗೆ ಬಂದಿದ್ದೇವೆ. ಹೆಚ್ಚಿನ ಮಾಹಿತಿಯನ್ನು ವೈದ್ಯರು ನೀಡುತ್ತಾರೆ" ಎಂದರು. ಮುರುಘಾಶ್ರೀ ಸಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ.
ಇದನ್ನೂ ಓದಿ:ಮುರುಘಾ ಶ್ರೀಗೆ ಹೃದಯ ಸಮಸ್ಯೆ : ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್