ಶಿವಮೊಗ್ಗ:ಗುಂಪು ಹತ್ಯೆಯ ವಿರುದ್ಧ ಕಠಿಣ ಕಾನೂನು ಜಾರಿ ಮತ್ತು ಗುಂಪು ಹತ್ಯೆ ಮಾಡುವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಶಿವಮೊಗ್ಗದ ಪೀಸ್ ಮುಸ್ಲಿಂ ಮಹಿಳಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಗುಂಪು ಹತ್ಯೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಮೌನ ಪ್ರತಿಭಟನೆ - shimogga
ಮುಸ್ಲಿಂರ ಮೇಲೆ ನಿಲ್ಲದ ಗುಂಪು ಹತ್ಯೆ, ಮೋಬ್ ಲಿಂಚಿಂಗ್ ವಿರುದ್ಧ ಕಠಿಣ ಕ್ರಮ ಜಾರಿಗೆ ತರಬೇಕೆಂದು ಮುಸ್ಲಿಂ ಸಮುದಾಯದವರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.
ಮುಸ್ಲಿಂ ಮಹಿಳೆಯರ ಪ್ರತಿಭಟನೆ
ಭಾರತ ಜಾತ್ಯತೀತ ರಾಷ್ಟ್ರ ,ಆದರೆ ಇಲ್ಲಿ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿದೆ. ಸಂವಿಧಾನದಲ್ಲಿ ಎಲ್ಲರೂ ಒಂದೇ ಆಗಿದ್ದರೂ ಸಹ ಕೆಲವು ಸಂಘಟನೆಗಳು ಅಮಾಯಕರ ಮೇಲೆ ಗುಂಪು ಹತ್ಯೆ ಮಾಡಲು ಪ್ರಚೋದನೆ ನೀಡುತ್ತಿವೆ ಎಂದು ಆರೋಪಿಸಿದರು.
ಈ ಕುರಿತು ಮಾತನಾಡಿದ ಮೆಹೇಕ್ ಶರೀಪ್ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹಾಗೂ ಬೇರೆ ಬೇರೆ ಕಡೆಗಳಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇವೆ. ನಮ್ಮನ್ನು ನೆಮ್ಮದಿಯಿಂದ ಬದುಕಲು ಬಿಡಿ, ಇಂತಹ ಕೃತ್ಯವನ್ನ ಮಾಡುವವರ ವಿರುದ್ಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
TAGGED:
shimogga