ಕರ್ನಾಟಕ

karnataka

ETV Bharat / state

ಕಾಂಗ್ರೆಸ್​​ನವರು ತಮ್ಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಕಟೀಲ್ - shimogga latest news

ಕಳೆದ ಬಾರಿಯ ಸಭೆಯಲ್ಲಿ ಗೋ‌ಹತ್ಯೆ ನಿಷೇಧ ಹಾಗೂ ಲವ್ ಜಿಹಾದ್ ಬಗ್ಗೆ ಚರ್ಚೆ ನಡೆಸಲಾಗಿತ್ತು. ಅದರಂತೆ ಕಳೆದ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲಾಗಿದೆ. ಮುಂದೆ ಲವ್ ಜಿಹಾದ್ ಜಾರಿಗೆ ತರಲಾಗುವುದು..

nalin kumar katil
ನಳಿನ್ ಕುಮಾರ್ ಕಟೀಲ್

By

Published : Jan 2, 2021, 1:18 PM IST

ಶಿವಮೊಗ್ಗ: ಕಾಂಗ್ರೆಸ್​ನವರು ತಮ್ಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿಯ ವಿಶೇಷ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾತನಾಡಿದ ಅವರು​ ​, ಗ್ರಾಮ ಪಂಚಾಯತ್​​ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಇದರಿಂದ ಕಾಂಗ್ರೆಸಿಗರಿಗೆ ಇನ್ನೂ 10 ವರ್ಷ ಅಧಿಕಾರಕ್ಕೆ ಬರಲ್ಲ ಎಂಬ ಭಯ ಪ್ರಾರಂಭವಾಗಿದೆ.

ಹಾಗಾಗಿ ಕಾಂಗ್ರೆಸ್​​ನವರು ಹತಾಶರಾಗಿ ಮಾತನಾಡಲು ಪ್ರಾರಂಭಿಸಿದ್ದಾರೆ ಎಂದರು. ಕಾಂಗ್ರೆಸ್​ನ ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.

ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ

ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ ಬಿಜೆಪಿಯ ವಿಶೇಷ ಸಭೆ ಹಾಗೂ ಕಾರ್ಯಕಾರಿಣಿ ಸಭೆ ನಡೆಯಲಿದೆ. ಇದಕ್ಕೆ ರಾಜ್ಯ ಬಿಜೆಪಿಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಕೇಂದ್ರದ ಮಂತ್ರಿಗಳು ಆಗಮಿಸಲಿದ್ದಾರೆ. ಜೊತೆಗೆ ನಮ್ಮ ರಾಜ್ಯದ ಸಿಎಂ ಯಡಿಯೂರಪ್ಪ ಆಗಮಿಸಲಿದ್ದಾರೆ ಎಂದರು. ಮಂತ್ರಿ ಮಂಡಲ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ, ಕಾಲ ಕಾಲಕ್ಕೆ ಅವೆಲ್ಲಾ ನಡೆಯುತ್ತವೆ ಎಂದರು.

ಈ ಸುದ್ದಿಯನ್ನೂ ಓದಿ:ನಾಳೆ ತವರು ಜಿಲ್ಲೆ ಶಿವಮೊಗ್ಗಕ್ಕೆ ಸಿಎಂ ಪ್ರವಾಸ..!

ಜಿಲ್ಲೆಯಲ್ಲಿ ಈ ಬಾರಿ ವಿಶೇಷ ಸಭೆ ನಡೆಸಲಾಗುತ್ತಿದೆ.‌ ಕಳೆದ ಬಾರಿಯ ಸಭೆಯಲ್ಲಿ ಗೋ‌ಹತ್ಯೆ ನಿಷೇಧ ಹಾಗೂ ಲವ್ ಜಿಹಾದ್ ಬಗ್ಗೆ ಚರ್ಚೆ ನಡೆಸಲಾಗಿತ್ತು. ಅದರಂತೆ ಕಳೆದ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲಾಗಿದೆ. ಮುಂದೆ ಲವ್ ಜಿಹಾದ್ ಜಾರಿಗೆ ತರಲಾಗುವುದು ಎಂದರು.

ABOUT THE AUTHOR

...view details