ಕರ್ನಾಟಕ

karnataka

ETV Bharat / state

ಜ.19ರಂದು ರಾಷ್ಟ್ರೀಯ ಪೋಲಿಯೋ ಲಸಿಕೆ ಕಾರ್ಯಕ್ರಮ - ರಾಷ್ಟ್ರೀಯ ಪೋಲಿಯೋ ಲಸಿಕೆ ಕಾರ್ಯಕ್ರಮ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಪೋಲಿಯೋ ಲಸಿಕೆ ಕಾರ್ಯಕ್ರಮದ ಅಂಗವಾಗಿ ಜ.19ರಂದು ಜಿಲ್ಲೆಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಿದೆ.

rajesh surgihalli
ಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ

By

Published : Jan 16, 2020, 9:57 PM IST

ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಪೋಲಿಯೋ ಲಸಿಕೆ ಕಾರ್ಯಕ್ರಮದ ಅಂಗವಾಗಿ ಜ.19ರಂದು ಜಿಲ್ಲೆಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಿದೆ.

ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಜ.19ರಂದು ಮರೆಯದೆ ಪೋಲಿಯೋ ಲಸಿಕೆ ಹಾಕಿಸಿ. ಪೋಲಿಯೋ ರೋಗ ಮಕ್ಕಳಿಗೆ ಅಂಗ ವಿಕಲತೆ ಉಂಟು ಮಾಡಬಹುದಾಗಿದೆ. ಪೋಲಿಯೋ ಲಸಿಕೆ ಹಾಕಿಸುವುದರಿಂದ ಮಾತ್ರ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿದೆ. ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ತೆರೆದಿರುವ ಲಸಿಕಾ ಕೇಂದ್ರಗಳಲ್ಲಿ ಜ.19ರಂದು ಬೆಳಿಗ್ಗೆ 8 ರಿಂದ ಸಂಜೆ 5ರವರೆಗೆ ಲಸಿಕೆ ಹಾಕಲಾಗುವುದು.

ನಗರದ ಬಸ್​ ನಿಲ್ದಾಣದಲ್ಲಿಯೂ ಲಸಿಕಾ ಕೇಂದ್ರ ತೆರೆದಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details